ಸಿಎಂ ಮತ್ತು ಸಚಿವರು ಕೆಪಿಸಿಸಿಗೆ ಬರಬೇಕು : ಪರಮೇಶ್ವರ್

G.Parameshwar.
ಬೆಂಗಳೂರು, ಮೇ 23 : ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಪ್ರತಿಯೊಬ್ಬ ಸಚಿವರು ತಿಂಗಳಿಗೊಮ್ಮೆ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ, ಇಲಾಖೆಗಳ ಪ್ರಗತಿ ವಿವರಣೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮಶ್ವರ್ ಹೇಳಿದ್ದಾರೆ. ಈ ಮೂಲಕ ಅಧಿಕಾರ ಪಡೆದ ನಂತರ ಪಕ್ಷದ ಕಚೇರಿಯಿಂದ ದೂರವಾಗಬಾರದು ಎಂಬ ಸಂದೇಶ ರವಾನಿಸಿದ್ದಾರೆ.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪರಮೇಶ್ವರ್, ಪ್ರತಿ ಸಚಿವರು ಕೆಪಿಸಿಸಿ ಕಚೇರಿಗೆ ಭೇಟಿ ನೀಡಲು ವೇಳಾಪಟ್ಟಿ ರಚಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿಕೊಡಲಾಗುತ್ತದೆ. ಕೆಪಿಸಿಸಿ ಕಚೇರಿಗೆ ಭೇಟಿ ನೀಡುವಂತೆ ಪ್ರತಿ ಸಚಿವರಿಗೂ ಪತ್ರ ಬರೆಯುತ್ತೇನೆ ಎಂದರು.

ಪ್ರತಿದಿನ ಒಬ್ಬರು ಸಚಿವರು ಕೆಪಿಸಿಸಿ ಕಚೇರಿಗೆ ಆಗಮಿಸಬೇಕು. ಕಾರ್ಯಕರ್ತರೊಂದಿಗೆ ಚರ್ಚಿಸಿ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳು ಅನುಷ್ಠಾನವಾಗುತ್ತಿರುವ ಬಗ್ಗೆ ಚರ್ಚಿಸಬೇಕು ಎಂದು ಹೇಳಿದರು.

ಕೆಪಿಸಿಸಿ ಹೈಕಮಾಂಡ್‌ಗೆ ಸರ್ಕಾರದ ಪ್ರಗತಿಯ ವರದಿಯನ್ನು ಕಾಲಕಾಲಕ್ಕೆ ನೀಡಬೇಕಾಗಿದೆ. ಆದ್ದರಿಂದ ಸಚಿವರು ಆಗಮಿಸಿ ಅವರ ಇಲಾಖೆಯ ಪ್ರಗತಿ ಬಗ್ಗೆ ಕಚೇರಿಗೆ ವರದಿ ನೀಡಬೇಕು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ನಿಗಮ - ಮಂಡಳಿ ಅಧ್ಯಕ್ಷ ಹುದ್ದೆ : ವಿವಿಧ ನಿಗಮ - ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ನಾಮ ನಿರ್ದೇಶನ ಸಮಯದಲ್ಲಿ ಕೆಲವು ನಿಯಮ ಪಾಲಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ.

ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಾಗೂ ಮುಖಂಡರನ್ನು ನಿಗಮ - ಮಂಡಳಿಗಳಿಗೆ ನೇಮಕ ಮಾಡಬೇಕು ಎಂದು ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದರು.

25 ಎಂಪಿ ಸ್ಥಾನ ಗುರಿ : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿ ರಾಷ್ಟಮಟ್ಟದಲ್ಲಿ ಕಾಂಗ್ರೆಸ್ ಗೆ ಬಲ ತುಂಬುವುದು ಪಕ್ಷದ ಗುರಿಯಾಗಿದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಪ್ರಯತ್ನಿಸುತ್ತದೆ ಎಂದು.

ಖಾತೆ ನೀಡಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಖಾತೆಗಳನ್ನು ತಮ್ಮ ಬಳಿ ಇಟ್ಟುಕೊಂಡು ಉಳಿದ ಖಾತೆಗಳನ್ನು ಬೇರೆಯವರಿಗೆ ನೀಡಲಿ. ಸಂಪುಟ ಸೇರಲು ಆಕಾಂಕ್ಷಿಗಳು ಹೆಚ್ಚಿದ್ದಾರೆ. ಶೀಘ್ರವೇ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಯನ್ನು ಮುಖ್ಯಮಂತ್ರಿಗಳು ಮಾಡಲಿ ಎಂದು ಪರಮಶ್ವರ್ ಸಲಹೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+