ಭ್ರಷ್ಟರಿಗೆ ಶಾಕ್, ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

Lokayukta
ಬೆಂಗಳೂರು, ಮೇ 24 : ಶುಕ್ರವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತರು ಶಾಕ್ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ 9 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರೀಶೀಲನೆ ನಡೆಸುತ್ತಿದ್ದಾರೆ.

ಶುಕ್ರವಾರ ಬೆಳಗ್ಗೆ ಬೆಂಗಳೂರು, ಕೊಡಗು, ಕೋಲಾರ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಡಿವೈಎಸ್ಪಿ ಪಾಲಾಕ್ಷ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ವಾಸಿಸುತ್ತಿರುವ ಪೌರಾಡಳಿತ ಇಲಾಖೆಯ ಪ್ರಥಮ ದರ್ಜೆ ಗುಮಾಸ್ತ ವೆಂಕಟೇಶ್ ಮತ್ತು ನಾಗರಬಾವಿಯಲ್ಲಿರುವ ಬಿಬಿಎಂಪಿ ಕಾರ್ಯನಿರ್ವಾಹಕ ಅಭಿಯಂತರ ಗೋವಿಂದಯ್ಯ ಅವರ ನಿವಾಸಗಳ ಮೇಲೆ ಡಿವೈಎಸ್‌ಪಿ ಪಾಲಾಕ್ಷ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿವೆ.

ಕೋಲಾರ : ಕೋಲಾರ ಜಿಲ್ಲೆಯ ಮೂರು ಕಡೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ತಾಲೂಕು ಇಒ ಸಂಜಪ್ಪ, ಲೆಕ್ಕ ಪರಿಶೋಧಕ ಮುನಿವೆಂಕಟಪ್ಪ, ಮುಳಬಾಗಿಲು ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಶ್ರೀಧರ್ ಅವರ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಾವಣಗೆರೆ : ಜಗಳೂರು ತಾಲೂಕಿನ ನೇರಲಗಿ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಜ್ಜಯ್ಯ ನಿವಾಸದ ಮೇಲೆ ಲೋಕಾಯುಕ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಂಗಾರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಅಕ್ರಮ ಸಂಪತ್ತಿಗೆ ಸಂಬಂಧಿಸಿದ ದಾಖಲೆ ಮತ್ತು ಚರ-ಚಿರಾಸ್ತಿಗಳ ವಿವರಗಳನ್ನು ವಶಪಡಿಸಿಕೊಂಡಿದ್ದಾರೆ.

ಕೊಡಗು : ಸಿಓಡಿ ಇನ್ಸ್‌ಪೆಕ್ಟರ್ ರಂಗಸ್ವಾಮಿ ಅವರ ಮಹದೇವಪೇಟೆ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಚಿತ್ರದುರ್ಗ ಆರ್ ಟಿಓ ಅಧಿಕಾರಿಯಾಗಿರುವ ನಜೀರ್ ಅಹಮ್ಮದ್‌ ಅವರಿಗೆ ಸೇರಿದ, ಮಡಿಕೇರಿಯ ಮಹದೇವಪೇಟೆಯಲ್ಲಿರುವ ನಿವಾಸದ ಮೇಲೂ ಲೋಕಾಯುಕ್ತ ಎಸ್ಪಿ ಜಗದೀಶ್ ಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿದೆ.

ಚಿಕ್ಕಮಗಳೂರು : ಕೊಪ್ಪ ಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯರಾದ ಡಾ.ಎನ್.ಆರ್.ರಾಮಚಂದ್ರ ನಿವಾಸದ ಮೇಲೆ ಡಿವೈಎಸ್‌ಪಿ ಪ್ರಸನ್ನ ವಿ.ರಾಜು ನೇತೃತ್ವದ ತಂಡ ದಾಳಿ ನಡೆಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+