ಬಾಗಲಕೋಟೆ : ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ

Bagalkot
ಬಾಗಲಕೋಟೆ, ಮೇ 27 : ಚುನಾವಣೆ ಮುಗಿದು ಹೊಸ ಸರ್ಕಾರ ರಚನೆ ಆದರೂ ಜನರಲ್ಲಿ ರಾಜಕೀಯ ದ್ವೇಷ ಕಡಿಮೆ ಆಗಿಲ್ಲ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಕ್ಷುಲ್ಲಕ ಕಾರಣಕ್ಕೆ ಬಡಿದಾಡಿಕೊಂಡಿದ್ದು, ಘರ್ಷಣೆ ವೇಳೆ ಕಾರ್ಯಕರ್ತರು ಗುಂಡು ಹಾರಿಸಿ ವಿರೋಧಿಗಳನ್ನು ಬೆದರಿಸಿದ್ದಾರೆ.

ಜಮಖಂಡಿ ತಾಲೂಕಿನ ಮದಲಮಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘರ್ಷಣೆಯಿಂದಾಗಿ 30 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾಮಿಸಿದ ಬನಹಟ್ಟಿ ಪೊಲೀಸರು ಅಶ್ರುವಾಯು ಸಿಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಆಗಿದ್ದೇನು : ಇಂದು ಮದಲಮಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪುಟ್ಟಣ್ಣ ಅವರ ವಿವಾಹವಿತ್ತು. ಇದಕ್ಕಾಗಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಕ್ಕೆ ಆಗಮಿಸಿದ್ದರು. ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ ಕಾರ್ಯಕರ್ತರೊಂದಿಗೆ ಜಗಳ ಮಾಡಿದ್ದಾನೆ.

ಇದರಿಂದ ಕೋಪಗೊಂಡ ಪರಸ್ಪರರ ನಡುವೆ ಘರ್ಷಣೆ ಪ್ರಾರಂಭವಾಗಿದೆ. ಘರ್ಷಣೆ ವೇಳೆ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ಮಾಡಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಕಾರ್ಯಕರ್ತರನ್ನು ಚದುರಿಸಲು ಪ್ರಯತ್ನಿಸಿದರು.

ಆದರೆ, ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾದ ಕಾರ್ಯಕರ್ತರನ್ನು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸರು ಚದುರಿಸಿದರು. ಘರ್ಷಣೆಯಿಂದಾಗಿ 30 ಮಂದಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.

ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಗ್ರಾಮಕ್ಕೆ ಹೆಚ್ಚಿನ ಪೊಲೀಸ್ ಪಡೆಗಳನ್ನು ಕರೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಹಳೆಯ ಗಲಾಟೆ : ಚುನಾವಣಾ ಸಮಯದಲ್ಲಿ ಗ್ರಾಮದಲ್ಲಿ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದರು. ಆದರೆ, ಆಗ ಪರಿಸ್ಥಿತಿ ತಿಳಿಯಾಗಿತ್ತು. ಹಳೆದ ದ್ವೇಷವೇ ಇಂದು ಮತ್ತೊಮ್ಮೆ ಘರ್ಷಣೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಬಾಗಲಕೋಟೆ ಸೋತು ಗೆದ್ದವರು)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+