• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಿರಿಯಾಪಟ್ಟಣ : ಮತದಾನ ಆರಂಭ

|

ಮೈಸೂರು, ಮೇ 28 : ಬಿಜೆಪಿ ಅಭ್ಯರ್ಥಿ ನಿಧನದಿಂದಾಗಿ ಮುಂದೂಡಲಾಗಿದ್ದ ಪಿರಿಯಾಪಟ್ಟಣ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದೆ. ಜನರು ಉತ್ಸಾಹದಿಂದ ಮತದಾನ ಮಾಡಿದ್ದು, ಶೇ 85ರಷ್ಟು ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ 31ರಂದು ಮತ ಎಣಿಕೆ ನಡೆಯಲಿದೆ.

ಬೆಳಗ್ಗೆ ಏಳು ಗಂಟೆಯಿಂದಲೇ ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯಿತು. 205 ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ. ಮತಗಟ್ಟೆ ಸಂಖ್ಯೆ 173ರಲ್ಲಿ ಮತಯಂತ್ರದಲ್ಲಿನ ತಾಂತ್ರಿಕ ದೋಷದಿಂದಾಗಿ ಮತದಾನ ಒಂದು ಗಂಟೆ ತಡವಾಗಿ ಆರಂಭವಾಯಿತು.

ಪೂಜೆಗೆ ಅವಕಾಶವಿಲ್ಲ : ತಾಲೂಕಿನ ಕಿತ್ತೂರು ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಮತ ಯಂತ್ರಕ್ಕೆ ಪೂಜೆ ಸಲ್ಲಿಸಲು ಮುಂದಾದಾಗ ಅಧಿಕಾರಿಗಳು ಅದಕ್ಕೆ ಅವಕಾಶ ನೀಡಿಲಿಲ್ಲ.

ಬೆಳಗ್ಗೆ 7 ಗಂಟೆಗೆ ಕಿತ್ತೂರಿನ ಮತಗಟ್ಟೆಗೆ ಪತ್ನಿ ಸಮೇತ ಆಗಮಿಸಿದ ವೆಂಕಟೇಶ್ ಮತಯಂತ್ರಕ್ಕೆ ಪೂಜೆ ಸಲ್ಲಿಸಲು ಮುಂದಾದರು. ಆದರೆ ಇದಕ್ಕೆ ಅಧಿಕಾರಿಗಳು ಅವಕಾಶ ನೀಡಲಿಲ್ಲ.

ಬಿಜೆಪಿ ಅಭ್ಯರ್ಥಿ ಆರ್ .ಟಿ.ಸತೀಶ್ ರಾವಂದೂರಿನಲ್ಲಿ ಮತ ಚಲಾಯಿಸಿದರು. ಮತದಾನಕ್ಕಾಗಿ ವ್ಯಾಪಕ ಭದ್ರತೆ ಒದಗಿಸಲಾಗಿತ್ತು. 11 ಮತಗಟ್ಟೆಗಳ ಮತದಾನವನ್ನು ವೆಬ್ ಕಾಸ್ಟಿಂಗ್ ಮೂಲಕ ಚುನಾವಣಾಧಿಕಾರಿಗಳು ನೇರವಾಗಿ ವೀಕ್ಷಿಸಿದರು.

ಕ್ಷೇತ್ರದ 1,62,397 ಮತದಾರರು ಎಂಟು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಿದ್ದು, ಮೇ 31ರ ಮತೆಣಿಕೆ ಮೇಲೆ ಎಲ್ಲರ ದೃಷ್ಠಿಬಿದ್ದಿದೆ. ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮಬಲ ಸಾಧಿಸಿದ್ದು, ಒಂದು ಸ್ಥಾನ ದೊರಕಿದರೆ, ವಿರೋಧ ಪಕ್ಷದ ಸ್ಥಾನ ದೊರೆಯಲಿದೆ.

ಬಂಧನ : ಚುನಾವಣೆ ಹಿನ್ನಲೆಯಲ್ಲಿ ಕ್ಷೇತ್ರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಇದನ್ನು ಮೀರಿ ಪಿರಿಯಾಪಟ್ಟಣ ಬಸ್ ನಿಲ್ದಾಣದಲ್ಲಿ 20 ಜನರ ಗುಂಪು ತೆರಳುತ್ತಿದ್ದು, ಅವರನ್ನು ತಡೆದ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka assembly election voting begins at Piriyapatna constituency. from morning 7 to evening 6 voting held at constituency. election commission has set up 205 polling booth. totally 1,62,397 voters in Piriyapatna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more