ಮುಂಬೈ : ಟ್ಯಾಂಕರ್, ಬಸ್ ಮುಖಾಮುಖಿ ಡಿಕ್ಕಿ,14 ಸಾವು

ಬುಧವಾರ ಬೆಳಗ್ಗೆ ಮುಂಬೈ ಹೊರವಲಯದ ಮೇದವ್ ಕಿಂಡ್ ಪ್ರದೇಶದಲ್ಲಿ ಅಹಮದಾಬಾದ್ ಕಡೆಯಿಂದ ಬರುತ್ತಿದ್ದ ತೈಲ ಟ್ಯಾಂಕರ್ ಖಾಸಗಿ ಬಸ್ ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, 14 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಧಾಮಿಸಿದ ಅಗ್ನಿ ಶಾಮಕ ದಳ ಮತ್ತು ಪೊಲೀಸರು 36ಕ್ಕೂ ಅಧಿಕ ಮಂದಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದರು. ಜಿಲ್ಲಾಧಿಕಾರಿ ಮನೋಜ್ ಸ್ಥಳದಲ್ಲಿ ಮೊಕ್ಕಂ ಹೂಡಿದ್ದು, ಪರಿಹಾರ ತಂಡಗಳಿಗೆ ನಿರ್ದೇಶನ ನೀಡುತ್ತಿದ್ದಾರೆ.
ಹತ್ತಿರದ ಆಸ್ಪತ್ರೆಗಳ ವೈದ್ಯಕೀಯ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುತ್ತಿವೆ. ಗಂಭೀರವಾಗಿ ಗಾಯಗೊಂಡವರನ್ನು ಮುಂಬೈ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.












Click it and Unblock the Notifications