ನವದೆಹಲಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ತಪ್ಪಿದ ದುರಂತ

ಆಸ್ಪತ್ರೆಯ 6ನೇ ಮಹಡಿಯಲ್ಲಿರುವ ಎಸಿ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಎಲ್ಲ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಬಂದಿದೆ.
ಪೂರ್ವ ದೆಹಲಿಯಲ್ಲಿರುವ ಗುರು ತೇಗ್ ಬಹಾದ್ದೂರ್ ಆಸ್ಪತ್ರೆ, ಸಾವಿರಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿದ್ದು, ಸರಕಾರ ನಡೆಸುತ್ತಿರುವ ಅತಿ ದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ.
2012ರ ಜುಲೈ 12ರಂದು ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಇದೇ ರೀತಿ ಅಗ್ನಿ ದುರಂತ ಸಂಭವಿಸಿತ್ತು. ಆಗ ಎಲ್ಲ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿ ದುರಂತ ತಪ್ಪಿಸಲಾಗಿತ್ತು. 2011ರ ಡಿಸೆಂಬರ್ 9ರಂದು ಕೋಲ್ಕತಾದ ಎಎಮ್ಆರ್ಐ ಆಸ್ಪತ್ರೆಯಲ್ಲಿ ಕೂಡ ಭಾರೀ ಬೆಂಕಿ ದುರಂತ ಸಂಭವಿಸಿ, 89 ರೋಗಿಗಳು ಬೆಂಕಿಗೆ ಆಹುತಿಯಾಗಿದ್ದರು.
ಕರ್ನಾಟಕ ಭವನದಲ್ಲೂ ಬೆಂಕಿ ಆಕಸ್ಮಿಕ : ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿರುವ ಹಳೆಯ ಕಟ್ಟಡದಲ್ಲಿ ಕೂಡ ಬುಧವಾರ ಬೆಂಕಿ ಆಕಸ್ಮಿಕ ಸಂಭವಿಸಿದೆ. ಹಳೆಯ ಕಟ್ಟಡದಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಎರಡು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ.












Click it and Unblock the Notifications