ಯುಪಿ ಸಿಎಂ ಅಖಿಲೇಶ್ ಯಾದವ್ ಕರ್ನಾಟಕ ಭೇಟಿ

ಬೆಂಗಳೂರು, ಮೇ 31 : ಸಮಾಜವಾದಿ ಪಕ್ಷದ ಯುವ ಮುಖಂಡ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮೈಸೂರು ಮತ್ತು ಬೆಂಗಳೂರಿಗೆ ಭೇಟಿ ನೀಡಲಿರುವ ಅವರು, ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಶ್ರೀರಾಮುಲು ಜೊತೆ ಸಹ ಮಾತುಕತೆ ನಡೆಸಲಿದ್ದಾರೆ.

ಉತ್ತಮ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ಅಖಿಲೇಶ್ ಯಾದವ್ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಜಯ ಸಾಧಿಸಿದ ಮಾಜಿ ಅರಣ್ಯ ಸಚಿವ ಮತ್ತು ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೀಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲು ಅಖಿಲೇಶ್ ಯಾದವ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಅಖಿಲೇಶ್ ಯಾದವ್ ಆಗಮಿಸಿರಲಿಲ್ಲ. ಆದ್ದರಿಂದ ಈಗ ಆಗಮಿಸಿ ರಾಜ್ಯದ ಏಕೈಕ ಸಮಾಜವಾದಿ ಪಕ್ಷದ ಶಾಸಕ ಸಿ.ಪಿ.ಯೋಗೀಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ತಾವು ಓದಿದ ಮೈಸೂರಿನ ಎಸ್ .ಜೆ.ಆರ್. ಸಿ ಕಾಲೇಜಿಗೂ ಅವರು ಭೇಟಿ ನೀಡಲಿದ್ದಾರೆ.

ಜೂನ್ 13ರಂದ ರಾಜ್ಯಕ್ಕೆ ಆಗಮಿಸುವ ಆಖಿಲೇಶ್ ಯಾದವ್ ಚನ್ನಪಟ್ಟಣ, ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಅವರು, ಬಿ.ಶ್ರೀರಾಮುಲು ಅವರ ಜೊತೆ ಸಹ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಜೂನ್ 13ರಂದು ಆಗಮನ

ಜೂನ್ 13ರಂದು ಆಗಮನ

ಮೂರು ದಿನಗಳ ಪ್ರವಾಸಕ್ಕಾಗಿ ಜೂ.13ರಂದು ಅಖಿಲೇಶ್ ಯಾದವ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಜೂನ್ 15 ರವರೆಗೂ ಅವರು ಕರ್ನಾಟಕದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಎರಡು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಯೋಗೇಶ್ವರ್ ಗೆ ಅಭಿನಂದನೆ

ಯೋಗೇಶ್ವರ್ ಗೆ ಅಭಿನಂದನೆ

ಜೂ.13ರಂದು ಚನ್ನಪಟ್ಟಣಕ್ಕೆ ತೆರಳಿ ಸಮಾಜವಾದಿ ಪಕ್ಷದ ಏಕೈಕ ಶಾಸಕ ಸಿ.ಪಿ.ಯೋಗೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಮೈಸೂರಿಗೆ ಅಖಿಲೇಶ್

ಮೈಸೂರಿಗೆ ಅಖಿಲೇಶ್

ಜೂ.14ರಂದು ಅಖಿಲೇಶ್ ಯಾದವ್ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಅವರು ಇಂಜಿನಿಯರಿಂಗ್ ಓದಿದ ಶ್ರೀ ಜಯಚಾಮರಾಜೇಂದ್ರ ಕಾಲೇಜಿಗೆ ತೆರಳಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.

 ಶ್ರೀರಾಮುಲು ಜೊತೆ ಸಭೆ

ಶ್ರೀರಾಮುಲು ಜೊತೆ ಸಭೆ

ಜೂನ್ 14 ರಂದು ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಜೊತೆ ಅಖಿಲೇಶ್ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಿದ್ದಾರೆ. ಇವುಗಳ ಅಂತಿಮ ತೀರ್ಮಾನ ಪಕ್ಷದ ನಾಯಕ ಮುಲಾಯಮ್ ಸಿಂಗ್ ಯಾದವ್ ಅವರ ಮೇಲೆ ನಿಂತಿದೆ.

ಬೆಂಗಳೂರು- ಮೈಸೂರು ರೋಡ್ ಶೋ

ಬೆಂಗಳೂರು- ಮೈಸೂರು ರೋಡ್ ಶೋ

ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಅಖಿಲೇಶ್ ಯಾದವ್ ರೋಡ್ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯೂ ಇದೆ. ಆದರೆ, ಇದು ಕೊನೆ ಕ್ಷಣದಲ್ಲಿ ರದ್ದಾಗಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+