ಬಳ್ಳಾರಿ : ಮೆಣಸಿನಕಾಯಿ ಗೋದಾಮಿಗೆ ಬೆಂಕಿ

fire
ಬಳ್ಳಾರಿ, ಜೂ.2 : ಮೆಣಸಿನಕಾಯಿ ಸಂಗ್ರಹಿಸಿದ್ದ ಗೋದಾಮಿ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮೆಣಸಿಕಾಯಿ ಅಗ್ನಿಗೆ ಆಹುತಿಯಾದ ಘಟನೆ ಬಳ್ಳಾರಿ ಹೊರವಲಯದಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಅಧಿಕಾರಿಗಳು ಆಗಮಿಸಿದ್ದು, ಕಾರ್ಯಚರಣೆ ಪ್ರಾರಂಭಿಸಿದ್ದಾರೆ.

ಭಾನುವಾರ ಬೆಳಗ್ಗೆ ಬಳ್ಳಾರಿ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀ ಸಾಯಿ ಬಾಲಾಜಿ ಕೋಲ್ಟ್ ಇಂಡಸ್ಟ್ರೀಸ್ ಮೆಣಸಿನಕಾಯಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಐದು ಅಗ್ನಿ ಶಾಮಕ ದಳಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿನಲು ಹರಸಾಹಸ ಪಡುತ್ತಿದ್ದಾರೆ. ಮೆಣಸಿನ ಕಾಯಿಯ ದಟ್ಟ ಹೊಗೆ ಆವರಿಸಿದ್ದು, ರಕ್ಷಣಾ ಕಾರ್ಯಚರಣೆಗೆ ಅಡ್ಡಿ ಉಂಟು ಮಾಡಿದೆ.

ಶಾರ್ಟ್ ಸರ್ಕಿಟ್ ನಿಂದಾಗಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬಳ್ಳಾರಿ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ. ಆದರೆ, ಗೋದಾಮಿನಲ್ಲಿ ಯಾರು ಕೆಲಸ ಮಾಡುತ್ತಿರಲಿಲ್ಲ. ಆದರೆ, ಸಂಗ್ರಹಿಸಿ ಇಡಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಮೆಣಸಿನಕಾಯಿ ಬೆಂಕಿಗೆ ಆಹುತಿಯಾಗಿದೆ ಎಂದು ಹೇಳಿದ್ದಾರೆ.

ಕಟ್ಟಡದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಮೆಣಸಿನ ಕಾಯಿ ಘಾಟಿನಿಂದಾಗಿ ಬೆಂಕಿ ನಂದಿಸುವುದು ಕಷ್ಟವಾಗಿದೆ. ಅಕ್ಕ ಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸದಂತೆ ಅಗ್ನಿಶಾಮಕ ದಳದ ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+