ಚೀನಾ : ಅಗ್ನಿ ದುರಂತಕ್ಕೆ 55 ಬಲಿ,ನೂರಾರು ಜನರಿಗೆ ಗಾಯ

fire accident
ಬೀಜಿಂಗ್, ಜೂ. 3: ಚೀನಾದ ಈಶಾನ್ಯ ಭಾಗದಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 55 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಗಳು ಮುಂದುವರೆದಿದ್ದು, ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳ ಯಶಸ್ವಿಯಾಗಿದೆ.

ಸೋಮವಾರ ಬೆಳಗ್ಗೆ ಸ್ಥಳೀಯ ಕಾಲಮಾನ ಆರು ಗಂಟೆ ಸುಮಾರಿನಲ್ಲಿ, ಮಿಶಾಜಿ ನಗರದ, ಜಿಲಿನ್ ಪ್ರಾಂತ್ಯದ ಕೋಳಿ ನಿರ್ವಹಣಾ ಘಟಕದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದವೊಳಗೆ ಮುನ್ನೂರು ಮಂದಿ ಕಾರ್ಮಿಕರಿದ್ದರು ಅವರಲ್ಲಿ 55 ಮಂದಿ ಸುಟ್ಟು ಕರಕಲಾಗಿದ್ದಾರೆ.

ಕೆಲಸಗಾರರುವೊಳಗೆ ಇರುವಾಗಲೇ ಬೆಂಕಿ ಹೊತ್ತಿಕೊಂಡಿದ್ದರಿಂದ ಹೊರಬರಲು ದಾರಿ ಸಿಗದೇ ಹೆಚ್ಚಿನ ಜನರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ. ಘಟನೆಯಿಂದಾಗಿ ೧೦೦ಕ್ಕೂ ಜನರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಾಣ ರಕ್ಷಣೆ ಮಾಡಿಕೊಳ್ಳುವ ರಭಸದಲ್ಲಿ ಕಾಲ್ತುಳಿತ ಸಂಭವಿಸಿ ಹಲವಾರು ಜನರು ಮೃತಪಟ್ಟಿದ್ದಾರೆ. ಅಗ್ನಿ ಶಾಮಕ ಪಡೆ ಮತ್ತು ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾಮಿಸಿ ಬೆಂಕಿ ಆರಿಸಿ, ರಕ್ಷಣಾ ಕಾರ್ಯವನ್ನು ಮುಂದುವರೆಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+