ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು

H.R.Bhardwaj
ಬೆಂಗಳೂರು, ಜೂ.3 : ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಸೋಮವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದರು. ಹೊಸದಾಗಿ ಆಯ್ಕೆಯಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಅವರು, ಐದು ವರ್ಷಗಳಲ್ಲಿ ಸರ್ಕಾರ ಮಾಡಬೇಕಾದ ಜನಪರ ಕಾರ್ಯಗಳ ಮೇಲೆ ಬೆಳಕು ಚೆಲ್ಲಿದರು. ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಜನಪರ ಆಡಳಿತ ನೀಡುವಂತೆ ಕರೆ ನೀಡಿದರು.

ಸೋಮವಾರ ಬೆಳಗ್ಗೆ 11 ಗಂಟೆಗೆ ಸರಿಯಾಗಿ ವಿಧಾನಸಭೆ ಜಂಟಿ ಅಧಿವೇಶನ ಪ್ರಾರಂಭವಾಯಿತು. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಸದನಕ್ಕೆ ಆಗಮಿಸಿ, ಜಂಟಿ ಸದನ ಉದ್ದೇಶಿಸಿ ಮಾತನಾಡಿದರು. ಜನರು ಸ್ಥಿರ ಸರ್ಕಾರ ಬಯಸಿ ಮತ ನೀಡಿದ್ದಾರೆ. ಜನರ ನಂಬಿಕೆ ಉಳಿಸಿಕೊಂಡು, ಉತ್ತಮವಾಗಿ ಆಡಳಿತ ನಡೆಸುವಂತೆ ಸಲಹೆ ನೀಡಿದರು.

ಕರ್ನಾಟಕ ಹಿಂದೆ ಬಂಡವಾಳ ಹೂಡಿಕೆಗೆ ಪ್ರಸಿದ್ಧಿ ಪಡೆದಿತ್ತು. ಅಂತಹ ದಿನಗಳು ಪುನಃ ಬರಬೇಕು. ಸ್ಥಿರವಾದ ಸರ್ಕಾರವಿದೇ ಅದನ್ನು ಬಳಸಿಕೊಂಡು ರಾಜ್ಯದ ಅಭಿವೃದ್ಧಿ ಮಾಡುವ ಜೊತೆಗೆ, ಆದಾಯ ಸಂಗ್ರಹಣೆ ಮಾಡಿ ರಾಜ್ಯದ ಬೊಕ್ಕಸ ತುಂಬಿಸಲು ಪ್ರಯತ್ನಿಸಿ ಎಂದು ಹೇಳಿದರು. ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಸಲು ಯೋಜನೆ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಸರ್ಕಾರದ ಐದು ವರ್ಷಗಳ ಕಾರ್ಯಕ್ರಮಗಳನ್ನು ಪರಾಮರ್ಶಿಸಿದ ಅವರು, ಸರ್ಕಾರ ಹಾಕಿಕೊಂಡಿರುವ ಜನಪರ ಯೋಜನೆಗಳು ಜನರಿಗೆ ತಲುಪಬೇಕು. ಯೋಜನೆ ಅನುಷ್ಠಾನದಲ್ಲಿ ಭ್ರಷ್ಟಾಚಾರ ಉಂಟಾಗಬಾರದು. ಸಂವಿಧಾನದ ಚೌಕಟ್ಟಿನಲ್ಲಿ ದುರ್ಬಲ ವರ್ಗದ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು

* ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಆಡಳಿತದ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು
* ಕೊಳಗೇರಿಗಳಲ್ಲಿ ವಾಸಿಸುವ ಜನರಿಗೆ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಾಣ ಮಾಡಿ ಕೊಡಬೇಕು
* ರಾಜ್ಯ ಗುಡಿಸಲು ಮುಕ್ತವಾಗಬೇಕು, ಸರ್ಕಾರ ಇದಕ್ಕಾಗಿ ಶ್ರಮಿಸಬೇಕು
* 371 ಕಾಲಂ ಅನುಷ್ಠಾನಕ್ಕೆ ಪ್ರತ್ಯೇಕ ಮಂಡಳಿ ರಚಿಸಬೇಕು. ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಬೇಕು
* ಕೃಷಿ ಮತ್ತು ಹೂಡಿಕೆ ವಲಯಕ್ಕೆ ಆದ್ಯತೆ ನೀಡಬೇಕು
* ಇ-ಡಿಸ್ಟ್ರಿಟ್ ಯೋಜನೆ ಮೂಲಕ ಸುಧಾರಿತ ತಂತ್ರಜ್ಞಾನಗಳನ್ನು ಉತ್ತಮ ಆಡಳಿತಕ್ಕಾಗಿ ಬಳಸಿಕೊಳ್ಳಬೇಕು
* ಕೋಲಾರ, ತಮಕೂರು, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು
* ಸಮರ್ಪಕ ಜವಳಿ ನೀತಿ ಜಾರಿಗೆ ತರುವುದು
* ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಬೇಕು
* ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಬೇಕು
* ವಿದ್ಯಾರ್ಥಿಗಳಿಗೆ ಏಕ ರೂಪದ ವಿದ್ಯಾರ್ಥಿ ವೇತನ ಜಾರಿಗೆ ತರಬೇಕು
* ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು
* ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಬೇಕು
* ಹಾಲಿಗೆ ನೀಡುವ ಪ್ರೋತ್ಸಾಹಧನ 2ರುಪಾಯಿನಿಂದ 4 ರುಪಾಯಿಗೆ ಹೆಚ್ಚಳ
* ತುಳು, ಬ್ಯಾರಿ, ಲಂಬಾಣಿ, ಕೊಂಕಣಿ ಭಾಷೆಗಳ ಅಭಿವೃದ್ಧಿಗೆ ಒತ್ತು
* ರಾಜ್ಯದ ಪಶು ವೈದ್ಯಕೀಯ ವಿವಿಗಳ ಆಧುನೀಕರಣಕ್ಕೆ ಆದ್ಯತೆ

ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷಗಳಲ್ಲಿ ಮಾಡಬೇಕಾಗಿರುವ ಕೆಲಸಗಳನ್ನು ರಾಜ್ಯಪಾಲರಿಂದ ಹೇಳಿಸಿವೆ. ಆದರೆ ರಾಜ್ಯಪಾಲರ ಭಾಷಣ ಪ್ರತಿ ಪಕ್ಷಗಳ ವಿರೋಧಕ್ಕೆ ಕಾರಣವಾಗಿದೆ. (ರಾಜ್ಯಪಾಲರ ಭಾಷಣದಲ್ಲಿ ಹೊಸತೇನಿಲ್ಲ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+