ಮದುವೆಗೆ ವಿರೋಧ : ಸಾವಿಗೆ ಶರಣಾದ ಪ್ರೇಮಿಗಳು

crime
ಬೆಂಗಳೂರು, ಜೂ. 8 : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದರು ಎಂಬ ಕಾರಣಕ್ಕಾಗಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಸಾವಿಗೆ ಶರಣಾದ ಧಾರುಣ ಘಟನೆ ಬೆಂಗಳೂರಿನ ಮಹದೇವಪುರದಲ್ಲಿ ನಡೆದಿದೆ. ಪ್ರೇಮಿಗಳಿಬ್ಬರು ಮರಣ ಹೊಂದಿದ್ದು, ಪ್ರೇಮ ಪ್ರಕರಣ ದುರಂತ ಅಂತ್ಯ ಕಂಡಿದೆ.

ಬೆಂಗಳೂರಿನ ಮಹದೇವಪುರದ ನಿವಾಸಿಗಳಾದ ಅನಿತಾ (25) ಹಾಗೂ ಪಾಂಡು (23) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಪರಸ್ಪರರು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಮತ್ತು ವಿವಾಹವಾಗುವ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ, ಅನಿತಾ ಮತ್ತು ಪಾಂಡು ಅವರ ಕುಟುಂಬ ಸದಸ್ಯರು ಇವರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು.

ಮನೆಯವರನ್ನು ಒಪ್ಪಿಸಲು ವಿಫಲವಾದ ಪ್ರೇಮಿಗಳು ಶನಿವಾರ ಬೆಳಗ್ಗೆ ಕೀಟ ನಾಶಕ ಸೇವಿಸಿ ಸಾವಿಗೆ ಶರಣಾಗಿದ್ದಾರೆ. ವಿಷ ಕುಡಿದ ರಮ್ಯಾ ತಕ್ಷಣ ಸಾವನ್ನಪ್ಪಿದ್ದಾಳೆ. ಆದರೆ, ಪಾಂಡುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತನೂ ಸಾವನ್ನಪ್ಪಿದ್ದಾನೆ.

ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬ ಸದಸ್ಯರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಳೆಗೆ ಮಗು ಬಲಿ : ಬಿಸಿಲನಾಡು ರಾಯಚೂರಿನಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆ ಸುರಿದಿದೆ. ಲಿಂಗಸಗೂರು ತಾಲೂಕಿನ ಮಾರಲದಿನ್ನಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮೌನೇಶ್ (4) ಮೃತಪಟ್ಟಿದ್ದಾನೆ. ಮಳೆಯಿಂದಾಗಿ ಗೋಡೆ ಶಿಥಿಲಗೊಂಡು ಮನೆಯಲ್ಲಿ ಮಗಿದ್ದದವರ ಮೇಲೆ ಬಿದ್ದಿದೆ. ಮಗುವಿನ ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಗಳನ್ನು ಮಸ್ಕಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+