ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಕಲಾ ಪರಿಷತ್ ಅಧ್ಯಕ್ಷ ಸ್ಥಾನ ಬಿ.ಎಲ್.ಶಂಕರ್ ಗೆ

|
Google Oneindia Kannada News

bl shankar
ಬೆಂಗಳೂರು, ಜೂ.13 : ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಾ.ಬಿ.ಎಲ್. ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಬಿ.ಎಲ್.ಶಂಕರ್ ಅವರು ಮಾತ್ರ ಉಳಿದಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಚಿತ್ರಕಲಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆಗೆ ಜೂ.16ರಂದು ಚುನಾವಣೆ ನಿಗದಿಪಡಿಸಲಾಗಿತ್ತು. ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆಯಲು ಬುಧವಾರ ಕೊನೆಯ ದಿನವಾಗಿತ್ತು. ಶಂಕರ್ ಮಾತ್ರ ಅಧ್ಯಕ್ಷ ಹುದ್ದೆಯಲ್ಲಿ ಉಳಿದಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕರ್ನಾಟಕ ಚಿತ್ರಕಲಾ ಪರಿಷತ್ತಿಗೆ ಕಳೆದ ನಾಲ್ಕು ವರ್ಷದಿಂದ ಆಡಳಿತಾಧಿಕಾರಿ ನೇಮಕಗೊಂಡಿದ್ದರು. ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಹುದ್ದೆಗೆ ಜೂ.15ರೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು.

ಎರಡನೇ ಬಾರಿ ಅಧ್ಯಕ್ಷರು : ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಹುದ್ದೆ ಮೂರು ವರ್ಷಗಳ ಅವಧಿಯದ್ದಾಗಿದೆ. ಡಾ.ಬಿ.ಎಲ್. ಶಂಕರ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆಯೂ ಅವರು ಪರಿಷತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಪ್ರತಿಷ್ಠೆ ಮರಳಲಿದೆ : ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಲ್.ಶಂಕರ್, ಕೋಲ್ಕತ್ತಾದ ಶಾಂತಿನಿಕೇತನದಂತೆ, ಕರ್ನಾಟಕ ಚಿತ್ರಕಲಾ ಪರಿಷತ್ ಪ್ರಸಿದ್ಧಿ ಹೊಂದುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ಚಿತ್ರಕಲಾ ಪರಿಷತ್ತಿನ ಕಾಲೇಜು ಸ್ಥಾಪಿಸಲು ಸರ್ಕಾರ ಮೂರು ಎಕರೆ ಭೂಮಿ ನೀಡಿದೆ. ಅನುದಾನ ಪಡೆದು ಕಾಲೇಜು ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಶಂಕರ್ ಹೇಳಿದರು.

ಬಿ.ಎಲ್.ಶಂಕರ್ ಅವರನ್ನು ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ಸರ್ಕಾರ ನಿಮಗ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನ ತುಂಬುವ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ. ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ಆಪ್ತರಾದ ಶಂಕರ್ ಅವರನ್ನು ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

English summary
Former minister B.L.Shankar was on Wednesday, June 12, unanimously elected the president of the Karnataka Chitrakala Parishat (CKP). His term is three years. This is the second time he is becoming the president. A total of 14 other office bearers for various positions were also unanimously elected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X