ಅಕ್ಟೋಬರಿನಲ್ಲಿ ಲೋಕಸಭಾ ಚುನಾವಣೆ: ಕೆಪಿಸಿಸಿ

16-lok-sabha-election-in-october-kpcc-chief-parameshwar
ಬೆಂಗಳೂರು, ಜೂನ್15- ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಅವರು ಅವಧಿಗೂ ಮುನ್ನವೇ 16ನೇ ಲೋಕಸಭಾ ಚುನಾವಣೆ ನಡೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆಡಳಿತಾರೂಢ ಮೈತ್ರಿಕೂಟದ ಸಾರಥ್ಯಯ ವಹಿಸಿರುವ ಕಾಂಗ್ರೆಸ್ ಪಕ್ಷದ ಲೆಕ್ಕಾಚಾರದಂತೆ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಮುಂದಿನ ಲೋಕಸಭೆ ಚುನಾವಣೆಯುವ ನಡೆಯುವ ಸಾಧ್ಯತೆಯಿದೆ ಅವರು ಹೇಳಿದ್ದಾರೆ.

ದೇಶದ ಭವಿಷ್ಯದ ದೃಷ್ಟಿಯಿಂದ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಕೆಪಿಸಿಸಿ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಕೇಂದ್ರದಿಂದ ಈ ಬಗ್ಗೆ ಸಂದೇಶ ರವಾನೆಯಾಗಿದೆ. ಆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಡಾ ಜಿ ಪರಮೇಶ್ವರ್ ಕರೆ ನೀಡಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾಜಿ ಶಾಸಕ ಮುದ್ದ ಹನುಮೇಗೌಡ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡ ಸಂದರ್ಭದಲ್ಲಿ ಅವರು ಈ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಕೈಹಿಡಿದಿರುವ ಮುದ್ದ ಹನುಮೇಗೌಡ ಅವರು ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಲಕ್ಷಣಗಳಿವೆ.

ಯುಪಿಎ ನೇತೃತ್ವದ ಸರಕಾರ ಮೂರನೆ ಅವಧಿಗೂ ಅಧಿಕಾರಕ್ಕೆ ಬರುವುದು ನಿಶ್ಚಿತ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಪರಮೇಶ್ವರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಸಿದ್ಧತೆ ನಡೆಸಿದ್ದು, ಇನ್ನು 10 ದಿನಗಳೊಳಗೆ ಜಿಲ್ಲಾ ವೀಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ತಾನು ಖುದ್ದು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯ ತಂತ್ರ ರೂಪಿಸಲಾಗುವುದು. ಬಿಜೆಪಿಯಲ್ಲಿನ ಗೊಂದಲಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+