ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ

ಸೋಮವಾರ ಅಂಬಿಕಾ (26) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿರುವ ಪೊಲೀಸರು, ಅಂಬಿಕಾ ಪತಿ ಆನಂದ್ ಅವರನ್ನು ಬಂಧಿಸಿದ್ದಾರೆ.
ಮೂರು ವರ್ಷದ ಹಿಂದೆ ಅಂಬಿಕಾ ಮತ್ತು ಆನಂದ್ ವಿವಾಹವಾಗಿದ್ದರು. ಇವರಿಗೆ ಒಂದು ವರ್ಷದ ಹೆಣ್ಣು ಮಗುವಿದೆ. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿಯ ಮನೆಯವರು ಅಂಬಿಕಾಗೆ ಹಿಂಸೆ ನೀಡಲು ಪ್ರಾರಂಭಿಸಿದ್ದಾರೆ.
ಇದರಿಂದ ತವರಿಗೆ ಮರಳಿದ ಅಂಬಿಕಾ ಅಲ್ಲೇ ನೆಲೆಸಿದ್ದರು. ಒಂದು ತಿಂಗಳ ಹಿಂದೆ ಪತಿ ಆನಂದ್ ನಾವು ತಪ್ಪು ಮಾಡಿದೆವು. ಅಂಬಿಕಾಳನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದು ತವರು ಮನೆಯಿಂದ ಕರೆದುಕೊಂಡು ಹೋಗಿದ್ದರು.
ನಂತರ ಮತ್ತೆ ವರದಕ್ಷಿಣೆಗಾಗಿ ಪೀಡಿಸಲು ಆರಂಭಿಸಿದ್ದಾರೆ. ಇದರಿಂದ ಮನನೊಂದ ಅಂಬಿಕಾ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೂರು ದಾಖಲು : ವರದಕ್ಷಿಣೆ ಆಸೆಗಾಗಿ ತಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು, ಅಂಬಿಕಾ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು, ಆನಂದ್, ಆತನ ತಂದೆ ಮತ್ತು ತಾಯಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅಂಬಿಕಾ ನಾದಿನಿ ಸವಿತಾ ಮತ್ತು ಮೈದುನಾ ವೇನು ವಿರುದ್ಧವೂ ದೂರು ದಾಖಲಾಗಿದ್ದು ಇವರಿಗಾಗಿ ಹೆಣ್ಣೂರು ಪೊಲೀಸರು, ಹುಟುಕಾಟ ಪ್ರಾರಂಭಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications