ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಸಿಎಂ

ಬೆಂಗಳೂರಿನಲ್ಲಿ ಇಂದು ಎಲ್ಲಾ ಪತ್ರಿಕೆಗಳ ಸಂಪಾದಕರೊಂಗಿದೆ ಸಂವಾದ ನಡೆಸಿದ ಸಿದ್ದರಾಮಯ್ಯ, ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುದಾಗಿ ಭರವಸೆ ನೀಡಿದರು. ಭ್ರಷ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಲೋಕಾಯಕ್ತದಾಳಿಗೆ ಒಳಗಾದ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಇನ್ನೊಂದು ವಾರದಲ್ಲಿ ಅನುಮತಿ ನೋಡುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗಳಿಂದ ಯಾವ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ ಮತ್ತು ತನಿಖೆ ನಡೆಸಲು ಮನವಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಪಡೆದುಕೊಂಡಿದ್ದೇನೆ.
ಎಷ್ಟು ಹಿರಿಯ ಅಧಿಕಾರಿಯಾದರೂ ಯಾವುದೇ ಒತ್ತಡಕ್ಕೆ ಮಣಿಯದೇ ತನಿಖೆಗೆ ಅವಕಾಶ ನೀಡಲಾಗುವುದು. ಕಾನೂನಿನ ವ್ಯಾಪ್ತಿಯಲ್ಲಿ ಎಲ್ಲರೂ ಸರಿ ಸಮಾನರು ಎಂದು ಸಿದ್ದರಾಮಯ್ಯ ಹೇಳಿದರು.
ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಲಾಗುವುದು. ಸರ್ಕಾರ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಭ್ರಷ್ಟ ಅಧಿಕಾರಿಗಳಿಗೆ ಸರಿಯಾದ ಶಿಕ್ಷೆ ಆಗಬೇಕು. ಆದ್ದರಿಂದ ತನಿಖೆಗೆ ಅನುಮತಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications