ಉಡುಪಿ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ರೇಪ್

ಗುರುವಾರ ರಾತ್ರಿ 11.30ರ ಸುಮಾರಿಗೆ 22 ವರ್ಷ ಪ್ರಾಯದ ಮಣಿಪಾಲ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯನ್ನು ಆಟೋರಿಕ್ಷಾದಲ್ಲಿ ಅಪಹರಿಸಿದ, ದುಷ್ಕರ್ಮಿಗಳು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಇಂದು ಬಿಡುಗಡೆಯಾಗಿರುವ 'ಆಟೋ ರಾಜ' [ಚಿತ್ರವಿಮರ್ಶೆ ಓದಿರಿ] ಚಿತ್ರದಲ್ಲಿಯೂ ಇಂಥದೇ ಘಟನೆಯ ಸುತ್ತ ಕಥೆ ಹೆಣೆಯಲಾಗಿದೆ.
ನಂತರ ಆಕೆಯನ್ನು ಮಣಿಪಾಲದ ಮಾಂಡವಿ ಪ್ಲಾಜಾದ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ವಿದ್ಯಾರ್ಥಿನಿ ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ.
ಘಟನೆ ಏನು : ರಾತ್ರಿ ಲೈಬ್ರರಿಯಿಂದ ಹಾಸ್ಟೆಲ್ ಗೆ ಹೋಗಲು ವಿದ್ಯಾರ್ಥಿನಿ ತೆರಳುತ್ತಿದ್ದಳು. ಈ ಸಮಯಕ್ಕೆ ಆಟೋದಲ್ಲಿ ಬಂದ ಮೂವರು, ವಿಳಾಸ ಕೇಳುವ ನೆಪದಲ್ಲಿ ಆಕೆಯನ್ನು ಮಾತನಾಡಿಸಿದ್ದಾರೆ. ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದಂತೆಯೇ, ಆಕೆಯನ್ನು ಆಟೋ ರಿಕ್ಷಾಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.
ಮೂರು ತಾಸಿನ ನಂತರ ವಿದ್ಯಾರ್ಥಿನಿಯನ್ನು ಮಾಂಡವಿ ಪ್ಲಾಜಾದ ಮುಂದೆ ಬಿಟ್ಟು ಪರಾರಿಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ ವಿದ್ಯಾರ್ಥಿನಿ ಸ್ನೇಹಿತರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ. ಆಕೆಯ ಒಂದು ಕಾಲು ಮುರಿದು ಹೋಗಿದೆ, ಘಟನೆಯಿಂದಾಗಿ ಯುವತಿ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮಣಿಪಾಲ ಕಾಲೇಜಿನ ಆಡಳಿತ ಮಂಡಳಿಯವರು ಸಹ ಮಣಿಪಾಲ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ ಎಂದು ಎಸ್ಪಿ ಅಶೋಕ್ ಗೋಯಲ್ ಹೇಳಿದ್ದಾರೆ. ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಮಣಿಪಾಲ ಠಾಣೆಗೆ ಭೇಟಿ ನೀಡಿ ಘಟನೆಯ ವಿವರ ಪಡೆದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications