ಮಣಿಪಾಲ ಗ್ಯಾಂಗ್ ರೇಪ್: ವಿದ್ಯಾರ್ಥಿಗಳ ತೀವ್ರ ಆಕ್ರೋಶ

Student Protest against Manipal Rape
ಮಣಿಪಾಲ, ಜೂ.23: ಉಡುಪಿ ಜಿಲ್ಲೆ ಮಣಿಪಾಲದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಆರಂಭದ ಇಂಥ ಅಪರಾಧಗಳಿಗೆ ಕಡಿವಾಣಬೇಕು ಇಲ್ಲದಿದ್ದರೆ ಕರ್ನಾಟಕ ಮತ್ತೊಂದು ದೆಹಲಿಯಾಗಿ ಪರಿವರ್ತನೆಯಾಗುವ ಎಲ್ಲಾ ಅಪಾಯಗಳಿದೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಜನನಿಬಿಡ ಪ್ರದೇಶದಿಂದ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಇದನ್ನು ಗಮನಿಸಿದಾಗ ದೆಹಲಿಯಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ನೆನಪಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದೆಹಲಿಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾದರೆ ಕಾಂಗ್ರೆಸ್ ಬಗ್ಗೆ ಜನರು ಕೆಟ್ಟದಾಗಿ ಆಡಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಆರಂಭದಲ್ಲೇ ಇಂತಹ ಪ್ರಕರಣಗಳ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು.

ಪೊಲೀಸರ 8 ತಂಡ: ವೈದ್ಯ ವಿದ್ಯಾರ್ಥಿನಿ ಮೇಲೆ ಗುರುವಾರ ಮಧ್ಯರಾತ್ರಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಪೊಲೀಸರ 8 ತಂಡಗಳನ್ನು ರಚಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬೋರಲಿಂಗಯ್ಯ ಸ್ವತಃ ಈ ತಂಡಗಳ ನೇತೃತ್ವ ವಹಿಸಿದ್ದಾರೆ

ಯುವತಿಯನ್ನು ಅಪಹರಿಸಿದ ಆಟೋ ರಿಕ್ಷಾ ಪತ್ತೆಯಾಗಿದ್ದು ತನಿಖೆ ಹಿನ್ನೆಲೆಯಲ್ಲಿ ಗೌಪ್ಯವಾಗಿಡಲಾಗಿದೆ. ಆಟೋ ಚಾಲಕ ಸೇರಿದಂತೆ ಅತ್ಯಾಚಾರ ನಡೆಸಿದ ಮೂವರೂ ಸ್ಥಳೀಯರೇ ಎಂಬುದನ್ನು ಪೊಲೀಸರು ದೃಢಪಡಿಸಿದ್ದಾರೆ.

ವಿದ್ಯಾರ್ಥಿಗಳ ಆಕ್ರೋಶ: ಅತ್ಯಾಚಾರ ಘಟನೆಗೆ ಜಿಲ್ಲಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶನಿವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಜಾತಿ, ಮತ, ರಾಜಕೀಯ ಯಾವುದನ್ನೂ ನೋಡದೆ ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂಬ ಆಗ್ರಹಿಸಿವೆ.

ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಎಸ್ ಪಿಗೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಎಬಿವಿಪಿ, ಹಿಂದೂ ಯುವಸೇನೆ, ಪಿಎಫ್‌ಐ, ಜಮಾತೆ ಇಸ್ಲಾಮಿಕ್ ಹಿಂದ್, ಅದರ ಸಹ ಸಂಸ್ಥೆ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಕರ್ನಾಟಕ, ಸೈಂಟ್ ಸಿಸಿಲಿಸ್ ಸಂಯುಕ್ತ ಪಿಯು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ, ಮೆರವಣಿಗೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆ ಮುಖ್ಯಸ್ಥ ರವಿಚಂದರ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+