ಹುಬ್ಬಳ್ಳಿ ಕಿಮ್ಸ್ ನಲ್ಲಿ ಮಲಹೊರುವ ಪದ್ಧತಿ ಜೀವಂತ

kims
ಹುಬ್ಬಳ್ಳಿ, ಜೂ.26 : ಕರ್ನಾಟಕ ರಾಜ್ಯದಲ್ಲಿ ವಿವಿಧ ಕಾನೂನುಗಳನ್ನು ಜಾರಿಗೆ ತಂದು ಮಲ ಹೊರುವ ಪದ್ಧತಿಯನ್ನು ಸರ್ಕಾರ ನಿಷೇಧಿಸಿದೆ. ಆದರೆ, ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಮಲ ಹೊರುವ ಪದ್ಧತಿ ಜೀವಂತವಾಗಿರುವುದು ಬೆಳಕಿಗೆ ಬಂದಿದೆ.

ಕಳೆದ ಎರಡು ದಿನಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಪೌರ ಕಾರ್ಮಿಕರು ಮತ್ತು ಆಸ್ಪತ್ರೆಯ ಸಿಬ್ಬಂದಿ ಕೊಳಚೆ ನೀರು ಸಂಸ್ಕರಣ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಆದರೆ, ಇದಕ್ಕೆ ಯಂತ್ರಗಳನ್ನು ಬಳಸದೇ ಕಾರ್ಮಿಕರ ಕೈಯಲ್ಲಿಯೇ ಸ್ವಚ್ಛಗೊಳಿಸಲಾಗುತ್ತಿದೆ.

ಆಪರೇಷನ್ ಥಿಯೇಟರ್, ವಿವಿಧ ಪ್ರಯೋಗಾಲಯಗಳು, ವೈದ್ಯರ ಕೊಠಡಿಗಳ ಶೌಚಾಲಯಗಳ ತಾಜ್ಯವನ್ನು ಕಾರ್ಮಿಕರು ಹೊತ್ತು ಸಾಗುತ್ತಿದ್ದಾರೆ. ಪೌರ ಕಾರ್ಮಿಕರು ಸೂಕ್ತವಾದ ಶೂ, ಕೈ ಗವಸು ಇಲ್ಲದೇ ಹಾಗೆಯೇ ಶೌಚದ ಗುಂಡಿಗಳನ್ನು ಶುಚಿಗೊಳಿಸುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಕಳೆದ ವರ್ಷದ ಆಗಸ್ಟ್ ನಲ್ಲಿ ನೂತನವಾಗಿ ನಿರ್ಮಿಸಲಾಗಿದೆ. ಒಂದು ವರ್ಷದಿಂದ ಅವುಗಳನ್ನು ಶುಚಿಗೊಳಿಸಿಲ್ಲ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯ ಅಧಿಕಾರಿಗಳು ಪೌರ ಕಾರ್ಮಿಕರನ್ನು ಕರೆತಂದೆ ಅವುಗಳನ್ನು ಶುಚಿಗೊಳಿಸುವ ಕೆಲಸ ಕೈಗೊಂಡಿದ್ದಾರೆ.

ಇಷ್ಟೊಂದು ಅಮಾನವೀಯತೆ : 12 ಅಡಿ ಆಳದ ಗುಂಡಿಯೊಳಗೆ ಪೌರ ಕಾರ್ಮಿಕರು ಯಾವುದೇ ಸುರಕ್ಷತೆ ಇಲ್ಲದೇ ಶೌಚ ಗುಂಡಿಯನ್ನು ಶುಚಿಗೊಳಿಸುತ್ತಿದ್ದಾರೆ. ಪ್ರತಿಷ್ಠತ ಆಸ್ಪತ್ರೆಯ ಅಧಿಕಾರಿಗಳು ಕಾರ್ಮಿಕರಿಗೆ ಯಾವುದೇ ಅಗತ್ಯ ವಸ್ತುಗಳನ್ನು ನೀಡದೆ, ಅಮಾನವೀಯವಾಗಿ ವರ್ತಿಸುತ್ತಿದ್ದಾರೆ.

ಕಾಮಗಾರಿಯಲ್ಲೂ ಗೋಲ್ ಮಾಲ್ : ಬೆಂಗಳೂರು ಮೂಲದ ಕಂಪನಿಯೊಂದು ಶೌಚಗುಂಡಿಗಳನ್ನು ನಿರ್ಮಿಸಿ, ಅದರ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿತ್ತು. ಆದರೆ, ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿ, ಕಂಪನಿ ಕಿಮ್ಸ್ ಆಸ್ಪತ್ರೆಗೆ ವಂಚಿಸಿದೆ. ಆದರೆ, ಈ ಕುರಿತು ಅಧಿಕಾರಿಗಳು ಯಾವುದೇ ತನಿಖೆ ನಡೆಸುತ್ತಿಲ್ಲ.

ರಾಜ್ಯ ಸರ್ಕಾರ ಮಲಹೊರುವ ಪದ್ಧತಿ ನಿಷೇಧಿಸಬೇಕು ಎಂದು ಕಾನೂನು ರೂಪಿಸಿದೆ. ಜನರಿಗೆ ಈ ಕುರಿತು ಅರಿವು ಮೂಡಿಸುತ್ತಿದೆ. ಆದರೆ, ಕಿಮ್ಸ್ ಆಸ್ಪತ್ರೆಯ ಅಧಿಕಾರಿಗಳಿಗೆ ಇದು ತಿಳಿದಿಲ್ಲ ಎಂದು ಕಾಣುತ್ತದೆ. ಆದ್ದರಿಂದ ಪೌರ ಕಾರ್ಮಿಕರನ್ನು ಪಶುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ.

ಸಂತೋಷ್ ಲಾಡ್ ಕ್ಲಾಸ್ : ಜೂನ್ 15ರಂದು ಕಿಮ್ಸ್ ಆಸ್ಪತೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಇದರಿಂದ ಆಸ್ಪತ್ರೆಯ ಸಿಬ್ಬಂದಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದರು.(ಹುಬ್ಬಳ್ಳಿ ಕಿಮ್ಸ್ ಅವ್ಯವಸ್ಥೆ ಕಂಡು ಲಾಡ್ ಕೆಂಡಾಮಂಡಲ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+