ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು : ಮೆಟ್ರೋ ಅವಘಡ ಒಬ್ಬ ಕಾರ್ಮಿಕ ಬಲಿ

|
Google Oneindia Kannada News

metro
ಬೆಂಗಳೂರು, ಜೂ.28 : ನಗರದಲ್ಲಿ ನಡೆಯುತ್ತಿರುವ ನಮ್ಮ ಮೆಟ್ರೋ ಕಾಮಗಾರಿಯ ಎರಡು ಪ್ರತ್ಯೇಕ ಪ್ರಕರಣದಲ್ಲಿ, ಒಬ್ಬ ಕಾರ್ಮಿಕ ಮೃತಪಟ್ಟರೆ, ನಾಗರೀಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀರಾಮಪುರ ಬಳಿ ಜೂ.24ರಂದು ಮೆಟ್ರೊ ನಿಲ್ದಾಣದಲ್ಲಿ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕ ರೂಪೇಶ್ ಸಿಂಗ್ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರಿಗೆ ಬೆನ್ನುಮೂಳೆ ಶಸ್ತ್ರ ಚಿಕಿತ್ಸೆಯನ್ನೂ ಮಾಡಲಾಗಿತ್ತು. ಆದರೆ ಗುರುವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಮೆಟ್ರೋ ನಿಗಮ ಸೂಚಿಸಿದೆ.

ರೂಪೇಶ್ ಹೊರ ರಾಜ್ಯದಿಂದ ಬಂದ ವಲಸೆ ಕಾರ್ಮಿರಾಗಿದ್ದು, ಅವರನ್ನು ಪುಂಜಿಲಾಯ್ಡ್ ಕಂಪನಿ ಕೆಲಸಕ್ಕೆ ನೇಮಿಸಿಕೊಂಡಿತ್ತು, ಕಂಪನಿ ವತಿಯಿಂದ ರೂಪೇಶ್ ಅವರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮೆಟ್ರೊ ನಿಗಮ ಭರವಸೆ ನೀಡಿದೆ.

ಗಾಯಗೊಂಡ ನಾಗರೀಕ : ಗುರುವಾರ ಮಧ್ಯಾಹ್ನ 3.30ರ ವೇಳೆಗೆ ದಾಸರಹಳ್ಳಿ ಮಾರುಕಟ್ಟೆ ಬಳಿ ನಡೆಯುತ್ತಿರುವ ಮೆಟ್ರೊ ಕಾಮಗಾರಿ ಸ್ಥಳದಲ್ಲಿ ನಡೆದುಕೊಂಡು ಹೋಗುತ್ತಿದ್ದ ಶ್ರೀನಿವಾಸಮೂರ್ತಿ ಅವರ ತಲೆ ಮೇಲೆ, ಬೋಲ್ಟ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದ್ದರು. ಸ್ಥಳೀಯರು ಅವರನ್ನು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರೀ ಎತ್ತರರಿಂದ ಬೋಲ್ಟ್ ತಲೆಯ ಮೇಲೆ ಬಿದ್ದಿದ್ದರಿಂದ ರಕ್ತಸ್ರಾವ ಉಂಟಾಗಿ, ಗಾಯಗೊಂಡಿದ್ದಾರೆ. ಶ್ರೀನಿವಾಸಮೂರ್ತಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಸಹೋದರ, ಎಸ್.ಆರ್.ಅಶೋಕ್ ಮಾಧ್ಯಮಗಳಿಗೆ ಹೇಳಿದ್ದಾರೆ.(ನಮ್ಮ ಮಟ್ರೋ 2ನೇ ಹಂತಕ್ಕೆ ಗ್ರೀನ್ ಸಿಗ್ನಲ್)

English summary
Separate mishaps at Namma Metro work sites resulted in the death of one, while another sustained injury. Rupesh Singh (39) dyed in Victoria Hospital. Srinivas Murthy (45) was injured after construction material fell on his head. M.S.Ramaiah Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X