ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕಗ್ಗೊಲೆ!

Shamsid Uda
ಬೆಂಗಳೂರು, ಜು.3 : ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರನ್ನು ಕಚೇರಿಯಲ್ಲೇ ಕತ್ತು ಕೊಯ್ದ ಕೊಲೆ ಮಾಡಿರುವ ದಾರುಣ ಘಟನೆ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಶಂಷಿಲ್ ಉದಾ (63) ಕೊಲೆಯಾದ ದುರ್ದೈವಿ. ಬುಧವಾರ ಬೆಳಗ್ಗೆ ಶಂಷಿಲ್ ಅವರನ್ನು ಟ್ಯಾನರಿ ರಸ್ತೆಯ ಈದ್ಗಾ ಕಾಂಪ್ಲೆಕ್ಸ್ ನಲ್ಲಿಯ ಕ್ರೆಡಿಟ್ ಕೋ ಆಪರೇಟಿವ್ ಕಚೇರಿಯಲ್ಲಿಯೇ ಕೊಲೆ ಮಾಡಲಾಗಿದೆ.

ಬೆಳಗ್ಗೆ 10 ಗಂಟೆ ವೇಳೆಗೆ ಸೊಸೈಟಿಯ ಕಂಪ್ಯೂಟರ್ ಆಪರೇಟರ್ ಆಗಮಿಸಿದಾಗ ಕೊಲೆಯಾದ ವಿಷಯ ಬೆಳಕಿಗೆ ಬಂದಿದೆ. ಪ್ರತಿದಿನ ಶಂಷಿಲ್ 8.30ಕ್ಕೆ ಸೊಸೈಟಿಗೆ ಆಗಮಿಸುತ್ತಿದ್ದರು.

ಬುಧವಾರ ಸಹ ಅವರು ಕಚೇರಿಗೆ ಆಗಮಿದ ಕೂಡಲೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಡಿ.ಜೆ.ಹಳ್ಳಿ ಪೊಲೀಸರು ಸೊಸೈಟಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ. (ದಕ್ಷ ಅಧಿಕಾರಿ ಮಹಾಂತೇಶ್ ದುರಂತ ಸಾವು)

ಕಳ್ಳರ ಕೃತ್ಯ ಶಂಕೆ : ಸೊಸೈಟಿ ದೋಚಲು ಬಂದ ಕಳ್ಳರು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶಂಷಿಲ್ ಇಂಗ್ಲಿಷ್ ಪತ್ರಿಕೆಯೊಂದನ್ನು ನಡೆಸುತ್ತಿದ್ದರು. ಆದ್ದರಿಂದ ಹಳೆಯ ದ್ವೇಷವಿರಬಹುದೇ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+