ಗದಗ : ವೀರಯೋಧನಿಗೆ ಅಂತಿಮ ನಮನ

Gadag : Basavaraj cremated with full honors
ಗದಗ, ಜು.3 : ಉತ್ತರಾಖಂಡ ಪ್ರವಾಹ ಪೀಡಿತರ ರಕ್ಷಣೆಯಲ್ಲಿ ತೊಡಗಿದ್ದಾಗ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಜಿಲ್ಲೆಯ ಯೋಧ, ಬಸವರಾಜ ಯರಗಟ್ಟಿ ಅವರ ಅಂತ್ಯಕ್ರಿಯೆ ಬುಧವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ನವದೆಹಲಿಯಿಂದ ಬಸವರಾಜ್ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 2 ಗಂಟೆಯ ವೇಳೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತರಲಾಯಿತು. ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ಅವರ ಸ್ವ ಗ್ರಾಮ ಜಗಾಪುರಕ್ಕೆ ಕಳೆಬರ ಆಗಮಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶರಣಪ್ಪ, ಜಿಲ್ಲಾಧಿಕಾರಿ ಎಸ್.ಟಿ.ಅಂಜನಕುಮಾರ್ ಯೋಧನ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು. ನಂತರ ತಾಲೂಕಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

ಸಚಿವರ ಸಾಂತ್ವನ : ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಮೃತ ಯೋಧನ ಮನೆಗೆ ಬುಧವಾರ ಭೇಟಿ ನೀಡಿ, ಸಾಂತ್ವನ ಹೇಳಿದರು. (ಉತ್ತರಾಖಂಡ : ಕಾಪ್ಟರ್ ಪತನದಲ್ಲಿ ರಾಜ್ಯದ ಇಬ್ಬರ ಸಾವು)

ಯೋಧನ ಕುಟುಂಬಕ್ಕೆ 10 ಲಕ್ಷ ರೂ.ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಬಸವರಾಜ್ ಪತ್ನಿ ಮತ್ತು ತಂಗಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಚಿವರು ಭರವಸೆ ನೀಡಿದರು. (ಕೇದಾರನಾಥ ಅನುಭವ ಬಿಚ್ಚಿಟ್ಟ ಬೆಂಗಳೂರು ನಿವಾಸಿ!)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+