1ರೂ.ಗೆ ಅಕ್ಕಿ ಯೋಜನೆ ಜುಲೈ 10 ರಿಂದ ಜಾರಿ

dineshgundu rao
ಬೆಂಗಳೂರು, ಜು.5 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಒಂದು ರೂ.ಗೆ ಒಂದು ಕೆಜಿ ಅಕ್ಕಿ ನೀಡುವ ಯೋಜನೆ, ಜುಲೈ 10ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಕಲ ರೀತಿಯಲ್ಲಿಯೂ ತಯಾರಿ ಮಾಡಿಕೊಂಡಿದೆ. ಜುಲೈ 10ರಂದು ಸಿಎಂ ಸಿದ್ದರಾಮಯ್ಯ ನಗರದ ಫ್ರೀಡಂ ಪಾರ್ಕ್ ನಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಪೋಲಿ ಪ್ರಾಂಶುಪಾಲರಿಗೆ ಬಿತ್ತು ಗೂಸಾ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ಬಿಎಡ್ ಕಾಲೇಜಿನ ಪ್ರಾಂಶುಪಾಲರಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಪ್ರಾಂಶುಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿತ್ರದುರ್ಗದ ಐಡಿಯಲ್ ಬಿಎಡ್ ಕಾಲೇಜಿನ ಪ್ರಿನ್ಸಿಪಾಲ್ ಕಾಲೇಜಿನ ವಿದ್ಯಾರ್ಥಿನಿಗೆ ಮೊಬೈಲ್ ಸಂದೇಶ ಕಳುಹಿಸುವ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶುಕ್ರವಾರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕುಟುಂಬಸ್ಥರ ಮೂಲಕ ವಿಷಯ ತಿಳಿದ ಸ್ಥಳೀಯರು ಕಾಲೇಜಿಗೆ ಮುತ್ತಿಗೆ ಹಾಕಿ ಪ್ರಾಂಶುಪಾಲರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಚಿತ್ರದುರ್ಗ ನಗರ ಠಾಣೆ ಪೊಲೀಸರು, ಪ್ರಾಂಶುಪಾಲರನ್ನು ಜನರಿಂದ ರಕ್ಷಿಸಿ ಆಸ್ಪತ್ರಗೆ ದಾಖಲಿಸಿದರು.

ಇಂಜಿನಿಯರ್ ಗೆ ಜೀವ ಬೆದರಿಕೆ : ಬಿಬಿಎಂಪಿ ಸಹಾಯಕ ಇಂಜಿನಿಯರ್ ರಂಗನಾಥ್ ಅವರಿಗೆ ಗುತ್ತಿಗೆದಾರ ಬಾಲನ್ ಎಂಬುವವರು ಟೆಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಜೀವ ಬೆದರಿಕೆ ಹಾಕಿದ ಘಟನೆ ಶುಕ್ರವಾರ ನಡೆದಿದೆ.

ರಾಜಾಜಿನಗರ ವ್ಯಾಪ್ತಿಯ ಗುತ್ತಿದಾರರಾದ ರಂಗನಾಥ್ ಈ ಕುರಿತು ಬಾಲನ್ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸೆಕ್ಯುರಿಟಿ ಗಾರ್ಡ್ ಕೊಲೆ : ಮಕ್ಕಳನ್ನು ಶಾಲೆಗೆ ಬಿಟ್ಟು ಬೈಕ್ ನಲ್ಲಿ ಮರಳುತ್ತಿದ್ದ ಸೆಕ್ಯುರಿಟಿ ಗಾರ್ಡ್ ನನ್ನು ಮೂವರು ಅಪರಿಚಿತರು ನಡು ರಸ್ತೆಯಲ್ಲೇ ಬ್ಯಾಟ್ ನಿಂದ ಹೊಡೆದು ಕೊಲೆ ಮಾಡಿದ್ದಾರೆ. ಬೆಂಗಳೂರಿನ ಮುನೇಶ್ವರ ಲೇಔಟ್ ನಿವಾಸಿ ಸಿದ್ದಲಿಂಗಪ್ಪ (45 ) ಕೊಲೆಯಾದ ವ್ಯಕ್ತಿ.

ಯಲಹಂಕ ಉಪನಗರದಲ್ಲಿರುವ ಶೇಷಾದ್ರಿಪುರಂ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಸಿದ್ದಲಿಂಗಪ್ಪ ಕೆಲಸ ಮಾಡುತ್ತಿದ್ದರು. ಹಳೆಯ ದ್ವೇಷದ ಹಿನ್ನಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಯಲಹಂಕ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+