ಕರ್ನಾಟಕದ ಸೂಪರ್ ಫಾಸ್ಟ್ ಸುದ್ದಿಗಳು

elephant
ಬೆಂಗಳೂರು, ಜು.9 :ಹೊಸೂರಿನ ಮುತ್ತಾಲಿ ಗ್ರಾಮದಲ್ಲಿ ಆನೆ ದಾಳಿಗೆ ಒಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ತಿಮ್ಮರಾಯಪ್ಪ (70) ಆನೆದಾಳಿಯಿಂದಾಗಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಮುತ್ತಾಲಿ ಗ್ರಾಮದ ಅರಣ್ಯದಲ್ಲಿ ತಿಮ್ಮರಾಯಪ್ಪ ಶವ ಪತ್ತೆಯಾಗಿದೆ.

ಆನೆ ಹಾವಳಿ : ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಾರ್ಟಹಳ್ಳಿ ಗ್ರಾಮಕ್ಕೆ ಐದು ಕಾಡಾನೆಗಳು ನುಗ್ಗಿದ್ದು, ಧಾಂದಲೆ ಆರಂಭಿಸಿವೆ. ಮನೆಯಲ್ಲಿದ್ದ ಐದು ಮೂಟೆ ರಾಗಿಯನ್ನು ನಾಶಪಡಿಸಿವೆ. ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಗಮಿಸಿದ ಐದು ಆನೆಗಳು ಮಾರ್ಟಳ್ಳಿ ಗ್ರಾಮಕ್ಕೆ ನುಗ್ಗಿದವು. 2 ಮನೆಗಳನ್ನು ನಾಶಪಡಿಸಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಿಯತಮೆ ಬಾವಿಗೆಸೆದ ಪ್ರಿಯಕರ : ಪ್ರಿಯತಮೆಯನ್ನು ಬಾವಿಗೆ ತಳ್ಳಿ ಪ್ರಿಯಕರ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪುಟ್ಟರ್ತಿ ಗ್ರಾಮದಲ್ಲಿ ನಡೆದಿದೆ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಕರೆತಂದು ಅತ್ಯಾಚಾರವೆಸಗಿ ಬಾವಿಗೆ ತಳ್ಳಿದ್ದಾನೆ ಎಂದು ತಿಳಿದು ಬಂದಿದೆ. ಪ್ರಾಣಾಪಾಯದಿಂದ ಯುವತಿ ಪಾರಾಗಿದ್ದು, ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಗೇಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೈಕಮಾಂಡ್ ಬಾಯಿಗೆ ಬೀಗ ಹಾಕಿದೆ : ಡಿ.ಕೆ.ಶಿವಕುಮಾರ್ ಸಚಿವರಾಗಬೇಕಿತ್ತು ಎಂಬ ಮಾಜಿ ಪ್ರತಿಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಶಿವಕುಮಾರ್ ನಿರಾಕರಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು ನಾನ್ನ ಬಾಯಿಗೆ ಬೀಗ ಹಾಕಿಕೊಂಡಿದ್ದೇನೆ ಎಂದು ಹೇಳಿದರು.

ಕುಮಾರಸ್ವಾಮಿ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ ಅದಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಬಾಯಿಗೆ ಬೀಗ ಹಾಕಿಕೊಂಡಿದ್ದೇನೆ. ಹೈ ಕಮಾಂಡ್ ಸಹ ನನ್ನ ಬಾಯಿಗೆ ಬೀಗ ಹಾಕಿದೆ ಎಂದು ಪ್ರತಿಕ್ರಿಯಿಸಿದ್ದಾರೆ.(ಕುಮಾರಸ್ವಾಮಿ ಹೇಳಿದ್ದೇನು)

ಶಾಸಕಿಗೆ ಸಿಐಡಿ ಭೀತಿ : ಅಕ್ರಮ ದಾಖಲೆ ನೀಡಿ ಜಮೀನು ಖರೀದಿ ಮಾಡಿರುವ ಆರೋಪ ಎದುರಿಸುತ್ತಿರುವ ಕೆಜಿಎಫ್ ಕ್ಷೇತ್ರದ ಬಿಜೆಪಿ ಶಾಸಕಿ ವೈ.ರಾಮಕ್ಕ ವಿರುದ್ಧ ಸಿಐಡಿ ತನಿಖೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಅಮರ್ ಕುಮಾರ್ ಪಾಂಡೆ ಹೇಳಿದ್ದಾರೆ. ಪ್ರಾಥಮಿಕವಾಗಿ ಶಾಸಕರು ಭೂಮಿ ಖರೀದಿ ಅವ್ಯಹಾರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಸಾಬೀತಾಗಿದೆ. ಆದ್ದರಿಂದ ಸಿಐಡಿ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಲಾಗಿದೆ ಎಂದು ತಿಳಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ : ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದವನ್ನು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿ ಡಾ.ರಾಮೇಗೌಡ ನೇತೃತ್ವದಲ್ಲಿ ನಡೆದ ವಿವಿಧ ಅಧಿಕಾರಿಗಳ ಸಭೆಯಲ್ಲಿ ವಿಮಾನ ನಿಲ್ದಾಣದವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಾಲಕ್ಕಾಗಿ ಪೀಡಿಸಿದರೆ ಫೋನ್ ಮಾಡಿ : ಕಾರ್ಖನೆ ಅಥವ ಕಚೇರಿ ಬಳಿ ಹೋಗಿ ಸಾಲದ ಕಂತು ಕಟ್ಟುವಂತೆ ಜನರಿಗೆ ಪೀಡಿಸಬೇಡಿ ಎಂದು ಖಾಸಗಿ ಬ್ಯಾಂಕ್ ಸಿಬ್ಬಂದಿಗಳಿಗೆ ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ) ಬಸವರಾಜ್ ಮಾಲಗತ್ತಿ ಸೂಚನೆ ನೀಡಿದ್ದಾರೆ. ಸಾಲದ ಕಂತು ಕಟ್ಟುವಂತೆ ಕಿರುಕುಳ ನೀಡಿದರೆ, ಹತ್ತಿರದ ಪೊಲೀಸ್ ಠಾಣೆ ಅಥವ 0821-2418101 ನಂಬರ್ ಗೆ ಕರೆ ಮಾಡಿ ದೂರು ದಾಖಲಿಸುವಂತೆ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+