ಪಂಚಾಯ್ತಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ!

H.K.Patil
ಬೆಂಗಳೂರು, ಜು.12 : ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಕಟ್ಟಡದ ಮೇಲೆ ಆಗಸ್ಟ್ 15ರಿಂದ ರಾಷ್ಟ್ರಧ್ವಜ ಹಾರಾಡಲಿದೆ. ಸ್ಥಳೀಯ ಸಂಸ್ಥೆಗಳ ಕಚೇರಿಯ ಮೇಲೆ ಪ್ರತಿನಿತ್ಯ ರಾಷ್ಟ್ರಧ್ವಜ ಹಾರಿಸಬೇಕು ಎಂದು ಸರ್ಕಾರ ನಿಯಮ ರೂಪಿಸಿದ್ದು, ಶೀಘ್ರದಲ್ಲೇ ಈ ಕುರಿತ ಆದೇಶ ಹೊರಬೀಳಲಿದೆ.

ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್, ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಮೇಲೆ ಪ್ರತಿನಿತ್ಯ ರಾಷ್ಟ್ರಧ್ವಜ ಹಾರಿಸಬೇಕೆಂದು ಸರ್ಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದು ಹೇಳಿದರು.

ಆಗಸ್ಟ್ 15ರಿಂದ ಈ ಆದೇಶ ರಾಜ್ಯದಲ್ಲಿ ಜಾರಿಗೆ ಬರಲಿದೆ. ನಂತರ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಕಟ್ಟಡಗಳ ಮೇಲೆ, ಪ್ರತಿನಿತ್ಯ ಕಡ್ಡಾಯವಾಗಿ ರಾಷ್ಟ್ರಧ್ವಜ ಹಾರಿಸಬೇಕು ಎಂದರು.

ಪಂಚಾಯತ್ ರಾಜ್ ಇಲಾಖೆ ಕಳೆ ಹಂತದಿಂದ ರಾಷ್ಟ್ರ ನಿರ್ಮಾಣ ಕಾರ್ಯ ಮಾಡುತ್ತದೆ. ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜದ ಜನರ ಭಾವನಾತ್ಮಕ ವಿಷಯವಾಗಿದೆ. ಈ ಕುರಿತು ಜನರಿಗೆ ಮತ್ತಷ್ಟು ಜಾಗೃತಿ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಚರ್ಚಿಸಿ ಕ್ರಮ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ನಿಯಮ ಜಾರಿಗೆ ತರಬೇಕು ಎಂದು ನಿರ್ಧರಿಸಲಾಗಿತ್ತು. ನಾಡಿನ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಬುದ್ಧಿ ಜೀವಿಗಳ ಜೊತೆ ಚರ್ಚಿಸಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಿಗೆ ಈ ಕುರಿತು ಈಗಾಗಲೇ ಮೌಖಿಕ ಆದೇಶ ನೀಡಲಾಗಿದ್ದು, ಸರ್ಕಾರ ಕೆಲವು ದಿನಗಳಲ್ಲಿ ಈ ಕುರಿತು ಅಧಿಕೃತ ಆದೇಶ ಹೊರಡಿಸಲಿದೆ ಎಂದು ಸಚಿವರು ಹೇಳಿದರು.

ಸರ್ಕಾರದ ಈ ನಿರ್ಧಾರದಿಂದಾಗಿ ವಿಧಾನಸೌಧದಂತೆ, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಕಚೇರಿಗಳ ಮೇಲೆ ಆಗಸ್ಟ್ 15ದಿಂದ ರಾಷ್ಟ್ರಧ್ವಜ ಹಾರಾಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+