ಎರಡು ದಿನ ಭಾರೀ ಮಳೆ ಬರುತ್ತಂತೆ, ಜೋಪಾನ

rain
ಬೆಂಗಳೂರು, ಜು.17 : ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಬುಧವಾರದಿಂದ ರಾಜ್ಯಾದ್ಯಂತ ಮತ್ತೆ ಮಳೆ ಆರಂಭವಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಎರಡು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ಬೆಳಗ್ಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಳೆದ ವಾರವೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿ ರಾಜ್ಯದಲ್ಲಿ ಮಳೆ ಪ್ರಾರಂಭವಾಗಿತ್ತು.

ಮಂಗಳವಾರ ಉಂಟಾದ ವಾಯುಭಾರ ಕುಸಿತದಿಂದಾಗಿ, ಮೇಲ್ಮೈ ಸುಳಿಗಾಳಿ 7.1 ಕಿಮೀ ಎತ್ತರದಲ್ಲಿ ಬೀಸುತ್ತಿದ್ದು, ಇದರಿಂದ ಸಮುದ್ರದಿಂದ ಬೀಸುವ ಗಾಳಿಯ ವೇಗ ಹೆಚ್ಚಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿಲಾಗಿದೆ.

ಅಲೆಗಳು ಆಂಧ್ರ ಕರಾವಳಿ ಕಡೆ ಚಲಿಸಿದರೆ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದೆ. ಆದರೆ, ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಳೆ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗಳು ವಿಳಂಬವಾಗುತ್ತಿವೆ.

ಬೆಂಗಳೂರಿನಲ್ಲಿ ಮಳೆ : ಮಂಗಳವಾರ ಸಂಜೆ ರಾಜಧಾನಿ ಬೆಂಗಳೂರಿನಲ್ಲಿ ಧಾರಕಾರ ಮಳೆಯಾಗಿದೆ. ರಾತ್ರಿ 8.30ರವರೆಗೆ ನಗರದಲ್ಲಿ ಒಟ್ಟು 8.0 ಮಿಮೀ ಮಳೆ ಸುರಿದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬಂಗಾಳಕೊಲ್ಲಿಯ ವಾಯುಭಾರದ ಕುಸಿತದ ಪರಿಣಾಮ ನಗರದ ಮೇಲೂ ಉಂಟಾಗಲಿದ್ದು, ಮುಂದಿನ ಎರಡು ದಿನ ಮೋಡ ಕವಿದ ವಾತಾವರಣದ ಜೊತೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+