ಬಿಜಿಎಸ್ ಮೆಡಿಕಲ್ ಕಾಲೇಜಿನ ಮೇಲೆ ಐಟಿ ದಾಳಿ

ಗುರುವಾರ 12 ಗಂಟೆ ವೇಳೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಬಿಜಿಎಸ್ ಸಂಸ್ಥೆಯ ಮೆಡಿಕಲ್ ಕಾಲೇಜಿನ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ವಿಜಯನಗರದಲ್ಲಿರುವುದು ಆದಿಚುಂನಗಿರಿ ಮಠದ ಶಾಖಾ ಕೇಂದ್ರವಾಗಿದ್ದು, ಅದರ ಮೇಲೆ ದಾಳಿ ನಡೆಸಿರುವುದು ಒಕ್ಕಲಿಗೆ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿರುವ ಅಂಬೇಡ್ಕರ್ ಮೆಡಿಕಲ್ ಕಾಲೇಜಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ಮತ್ತು ಗುಲ್ಬರ್ಗಾದ ಮೂರು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಶಶೀಲ್ ನಮೋಶಿ ನಿವಾಸದ ಮೇಲೆ ದಾಳಿ : ಗುಲ್ಬರ್ಗಾದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶಶೀಲ್ ನಮೋಶಿ ಮನೆ ಮೇಲೆಯೂ ದಾಳಿ ನಡೆಸಲಾಗಿದೆ. ಶಶೀಲ್ ನಮೋಶಿ ಮಾಜಿ ವಿಧಾನಪರಿಷತ್ ಸದಸ್ಯರಾಗಿದ್ದು, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದಾರೆ. ಹೈಕ ಶಿಕ್ಷಣ ಸಂಸ್ಥೆಗಳ ಹಲವು ಕೌನ್ಸಿಲರ್ ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. (ಮಠದ ಮೇಲಿನ ದಾಳಿಗೆ ವ್ಯಾಪಕ ಖಂಡನೆ)
ಡಿ.ಕೆ.ಶಿವಕುಮಾರ್ ಖಂಡನೆ : ಬಿಜಿಎಸ್ ಮೆಡಿಕಲ್ ಕಾಲೇಜಿನ ಕಚೇರಿ ಮಾಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕ್ರಮವನ್ನು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ಧಾರ್ಮಿಕ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಮಠಗಳು ಸಮಾಜಕ್ಕೆ ಕೊಡುಗೆ ನೀಡುವ ಕೆಲಸ ಮಾಡುತ್ತವೆ. ಅಂತಹ ಮಠಗಳು ನಡೆಸುವ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಸಡೆಸುವ ಕ್ರಮ ಸರಿಯಲ್ಲ ಎಂದು ಹೇಳಿದ್ದಾರೆ.
ಸದಾನಂದ ಗೌಡರು ಗರಂ : ವಿಧಾನ ಪರಿಷತ್ ನಲ್ಲಿ ಆದಿಚುಂಚನಗಿರಿ ಮಠದ ಮೇಲಾಗಿರುವ ದಾಳಿಯನ್ನು ಖಂಡಿಸಿದ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಠ-ಮಂದಿರಗಳ ಮೇಲೆ ದಾಳಿ ನಡೆದೆ, ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಠದ ಮೇಲೆ ದಾಳಿ ನಡೆಸಿರುವುದು ಸರಿಯಲ್ಲ ಎಂದು ದಾಳಿಯನ್ನು ಖಂಡಿಸಿದರು.
ಸಚಿವರು ಹೊಣೆ : ಗೌರವದ ಪ್ರತೀಕವಾಗಿರುವ ಮಠದ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಇದು ಒಂದು ಸಮುದಾಯದ ಸ್ವಾಭಿಮಾನವನ್ನು ಕೆಣಕುತ್ತದೆ. ಇಂತಹ ಬೆಳವಣಿಗೆಗಳಿಗೆ ಕೇಂದ್ರ ಸರ್ಕಾರದಲ್ಲಿರುವ ರಾಜ್ಯದ ಸಚಿವರೆ ಹೊಣೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.












Click it and Unblock the Notifications