ಗುಂಡೇಟಿಗೆ ಮಾಜಿ ಶಾಸಕ ಬಲಿ, ಉ.ಪ್ರ ಉದ್ವಿಗ್ನ

Uttar Pradesh
ಉತ್ತರ ಪ್ರದೇಶ, ಜು.19 : ಉತ್ತರ ಪ್ರದೇಶದಲ್ಲಿ ಮಾಜಿ ಶಾಸಕ ಸೇರಿದಂತೆ ಇಬ್ಬರನ್ನು ಶುಕ್ರವಾರ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಅಝಮ್‌ಗರ್ ನ ಜಿಯಾನ್‌ಪುರದ ಶಿಕು ಎಂಬಲ್ಲಿ ಶುಕ್ರವಾರ ಬೆಳಗ್ಗೆ, ಬಿಎಸ್ಪಿಯ ಮಾಜಿ ಶಾಸಕ ಸರ್ವೇಶ್ ಸಿಂಗ್ ಸಿಪ್ಪು ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಈ ವೇಳೆ ಸರ್ವೇಶ್ ಅವರೊಂದಿಗಿದ್ದ ಇಬ್ಬರು ವ್ಯಕ್ತಿಗಳು ಸಹ ಸಾವನ್ನಪ್ಪಿದ್ದಾರೆ.

ಸರ್ವೇಶ್ ಮತ್ತು ಸಂಗಡಿಗರು ಪ್ರಕರಣದವೊಂದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿದ್ದರು. ಅಲ್ಲಿಂದ ಮರಳುವಾಗ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ನಡೆಸಿವರು ಮುಸುಕುಧಾರಿಗಳಾಗಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಮುಖಂಡನ ಹತ್ಯೆಯಿಂದಾಗಿ ಶಿಕು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಪೊಲೀಸ್ ಠಾಣೆಗೆ ಕಲ್ಲೆಸೆದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸರನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಸ್ಥಳದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರು ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದಾರೆ.

ಸಮಾಜವಾದಿ ಪಕ್ಷದಲ್ಲಿದ್ದ ಸರ್ವೇಶ್ ನಂತರ ಬಿಎಸ್ಪಿ ಪಕ್ಷಕ್ಕೆ ಸೇರಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿಯಿಂದ ಸ್ಪರ್ಧಿಸಿ, ಸೋಲು ಅನುಭವಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+