ಕೆಜೆಪಿಯೊಂದಿಗೆ ಮೈತ್ರಿ ಇಲ್ಲ : ಪ್ರಹ್ಲಾದ್ ಜೋಶಿ

ಗುರುವಾರ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಹ್ಲಾದ್ ಜೋಶಿ, ಕೆಜೆಪಿಯೊಂದಿಗೆ ಪಕ್ಷ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದು ವಿಧಾನಸಭೆಯೊಳಗೆ ಮಾತ್ರ ಅನ್ವಯಿಸುತ್ತದೆ. ಚುನಾವಣೆ ಎದುರಿಸಲು ನಾವು ಕೆಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.
ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಪ್ರತಿಪಕ್ಷಗಳು ಒಗ್ಗಟ್ಟಾಗಬೇಕು ಎಂದು ಕರೆ ನೀಡಿದ್ದಾರೆ. ಆದರೆ, ರಾಜ್ಯ ಬಿಜೆಪಿಯ ಮುಂದೆ ಯಾವುದೇ ಮೈತ್ರಿಯ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದರು. (ಪ್ರತಿಪಕ್ಷಗಳು ಒಂದಾಗಲೂ ಬಿಎಸ್ವೈ ಆಹ್ವಾನ)
ವರಿಷ್ಠರ ನಿರ್ಧಾರ : ಲೋಕಸಭೆ ಚುನಾವಣೆಯಲ್ಲಿ ಸೀಟು ಹೊಂದಾಣಿಕೆ ವಿಚಾರದ ಕುರಿತು ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಎದ್ದಿರುವ ಮೈತ್ರಿ ಮತ್ತು ಹೊಂದಾಣಿಕೆಯ ಸುದ್ದಿಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ವಿಧಾನಸೌಧಕ್ಕೆ ಮುತ್ತಿಗೆ : ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ವಿಧೇಯಕವನ್ನು ವಾಪಸ್‌ಗೆ ಪಡೆಯಬೇಕು ಎಂದು ಆಗ್ರಹಿಸಿ ಜು. 25ರಂದು ಬಿಜೆಪಿ ರಾಜ್ಯ ಘಟಕ ವಿಧಾನಸೌಧ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜೋಶಿ ಹೇಳಿದರು.
ಕಾಂಗ್ರೆಸ್ ಸರ್ಕಾರ ಗ್ರಾಮ ಪಂಚಾಯಿತು ಅಧ್ಯಕ್ಷರು ಮತ್ತು ಸದಸ್ಯರ ಮೇಲೆ ರಾಜಕೀಯ ಹಿಡಿತ ಸಾಧಿಸಲು ಇಂತಹ ಜನವಿರೋಧಿ ಕಾಯಿದೆ ರೂಪಿಸಿದೆ. ಈ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಚುನಾವಣೆ ತಯಾರಿ : ಲೋಕಸಭೆ ಚುನಾವಣೆಗೆ ಪಕ್ಷ ತಯಾರಿ ಆರಂಭಿಸಿದೆ ಎಂದ ಪ್ರಹ್ಲಾದ್ ಜೋಶಿ, ಪಕ್ಷದ ಸಂಘಟನಾತ್ಮಕ ಕಾರ‌್ಯಕ್ಕೆ ಒತ್ತು ನೀಡಲು ವಾರ್ಡ್ ಮಟ್ಟದ 13,080 ಸಮಿತಿಗಳ ಪೈಕಿ 10 ಸಾವಿರದಷ್ಟು ಸಮಿತಿಗಳನ್ನು ರಚಿಸಲಾಗಿದೆ.
ವಿಧಾನಸಭೆ ಕ್ಷೇತ್ರಗಳು ಒಳಗೊಂಡಿರುವ 271 ಮಂಡಲಗಳ ಪೈಕಿ 180ರಲ್ಲಿ ಅಧ್ಯಕ್ಷ, ಪ್ರಧಾನ ಕಾರ‌್ಯದರ್ಶಿಗಳ ಘೋಷಣೆ ಆಗಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲಾ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ ಎಂದು ಮಾಹಿತಿ ನೀಡಿದರು.












Click it and Unblock the Notifications