ದಾಖಲೆ ಕುಸಿತ ಕಂಡಿದ್ದ ಜಲಾಶಯಗಳು ಭರ್ತಿ
ಬೆಂಗಳೂರು, ಜು.20 : ಮುಂಗಾರು ಮಳೆ ಕರ್ನಾಟಕಕ್ಕೆ ಈ ಬಾರಿ ಅನ್ಯಾಯ ಮಾಡಿಲ್ಲ. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ಜಲಶಾಯಗಳು ಭರ್ತಿಯಾಗುತ್ತಿವೆ. ಕಳೆದ ವರ್ಷ ಬರ ಪರಿಸ್ಥಿತಿಯಿಂದ ಕಂಗಾಲಾಗಿದ್ದ ರೈತರಲ್ಲಿ ಮುಖದಲ್ಲಿ ಈ ಬಾರಿ ಮಂದಹಾಸ ಮೂಡಿದೆ.
ಜೂನ್ ಮೊದಲ ವಾರದಿಂದ ಆರಂಭವಾದ ಮುಂಗಾರು ಮಳೆ ಮತ್ತು ಜುಲೈನಲ್ಲಿ ಎದುರಾದ ಎರಡು ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಉತ್ತಮವಾದ ಮಳೆ ಸುರಿಯುತ್ತಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿವೆ.
ಇತಿಹಾಸದಲ್ಲೇ ದಾಖಲೆ ಕುಸಿತ ಕಂಡಿದ್ದ ಕಾವೇರಿ ಪಾತ್ರದ ಪ್ರಮುಖ ಜಲಾಶಯ ಕೆಆರ್ಎಸ್ ಭರ್ತಿಯಾಗಲು 9 ಅಡಿ ಬಾಕಿ ಉಳಿದಿದೆ. ಜಲಾಶಯಕ್ಕೆ 19,330 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 3,803 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ.
ತಮಿಳುನಾಡಿಗೆ ನೀರು ಹರಿಸಿದ್ದರಿಂದ ಖಾಲಿಯಾಗಿದ್ದ ಹಾರಂಗಿ, ಕಬಿನಿ ಜಲಾಶಯಗಳು ಭರ್ತಿಯಾಗಿವೆ. ಕಬಿನಿ ಜಲಾಶಯಕ್ಕೆ 28,000 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 25,000 ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.

ರಾಜ್ಯದ ವಿದ್ಯುತ್ ಉತ್ಪಾದನೆಯಲ್ಲಿ ಪ್ರಮಖ ಪಾತ್ರ ವಹಿಸುವ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು 25 ಅಡಿ ಬಾಕಿ ಇದೆ. ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾದ ಆಲಮಟ್ಟಿ ಜಲಾಶಯ ಭರ್ತಿಯಾಗಲು ಕೇವಲ 1 ಮೀಟರ್ ನೀರಿನ ಅಗತ್ಯವಿದೆ. (ಕರ್ನಾಟಕದಲ್ಲಿ ಮಳೆಯ ಅಬ್ಬರ)
ಜಲಾಶಯಗಳ ನೀರಿನ ಮಟ್ಟ
| ಜಲಾಶಯ | ಇಂದಿನ ಮಟ್ಟ | ಗರಿಷ್ಟ ಮಟ್ಟ |
| ಆಲಮಟ್ಟಿ | 518.050 ಮೀ | 519.60ಮೀ |
| ಕೆಆರ್ಎಸ್ | 115 ಅಡಿ | 124.80 ಅಡಿ |
| ಲಿಂಗನಮಕ್ಕಿ | 1793.90 ಅಡಿ | 1819 ಅಡಿ |
| ಕಬಿನಿ | 80.50 ಅಡಿ | 84 ಅಡಿ |
| ತುಂಗಭದ್ರಾ | 1627.57 ಅಡಿ | 1633 ಅಡಿ |
| ಭದ್ರಾ | 165.10 ಅಡಿ | 186.00 ಅಡಿ |
| ಹಾರಂಗಿ | 2857.86 ಅಡಿ | 2859.86 ಅಡಿ |
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications