ಸಿಎಂ ತವರು ಜಿಲ್ಲೆಯಲ್ಲಿ ಉಪ ಚುನಾವಣೆ ಘೋಷಣೆ

vote
ನವದೆಹಲಿ, ಜು.23 : ಕರ್ನಾಟಕದ ಎರಡು ಕ್ಷೇತ್ರಗಳ ಲೋಕಸಭೆ ಉಪ ಚುನಾವಣೆ ಘೋಷಿಸಿದ್ದ ಕೇಂದ್ರ ಚುಣಾವಣಾ ಆಯೋಗ, ವಿಧಾನ ಪರಿಷತ್ ನ ಮೂರು ಸ್ಥಾನದ ಚುನಾವಣಾ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಮೈಸೂರು ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನ ಮಾಡಲಿರುವ ಉಪ ಚುನಾವಣೆ ಆ.22ರಂದು ನಡೆಯಲಿದ್ದು, ಆ.26ರಂದು ಮತ ಎಣಿಕೆ ನಡೆಯಲಿದೆ ಎಂದು ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಚುನಾವಣೆಗೆ ಮುನ್ನ ಕೆ. ಆರ್. ಮಲ್ಲಿಕಾರ್ಜುನಪ್ಪ ತಮ್ಮ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿ ತೊರೆದು ಕೆಜೆಪಿ ಸೇರಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಎದುರಾಗಿದೆ.

ಚಿತ್ರದುರ್ಗ, ಧಾರವಾಡದಲ್ಲೂ ಚುನಾವಣೆ : ಮೈಸೂರಿನ ಜೊತೆಗೆ ಶಿವರಾಜ್ ಸಜ್ಜನ್ ರಾಜೀನಾಮೆಯಿಂದ ತೆರೆವಾದ ಧಾರವಾಡ ಸ್ಥಳೀಯ ಸಂಸ್ಥೆ ಮತ್ತು ಜಿ. ಎಚ್. ತಿಪ್ಪಾರೆಡ್ಡಿ ಅವರ ರಾಜೀನಾಮೆಯಿಂದ ತೆರೆವಾದ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳಿಗೂ ಆ.22ರಂದು ಚುನಾವಣೆ ನಡೆಯಲಿದೆ.

ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಸಿದ್ಧವಾಗುತ್ತಿದ್ದ ರಾಜಕೀಯ ಪಕ್ಷಗಳು, ವಿಧಾನ ಪರಿಷತ್ ಚುನಾವಣೆಗೂ ಅಭ್ಯರ್ಥಿಯನ್ನು ಹುಡುಕಬೇಕಾಗಿದೆ. (ಲೋಕಸಭೆ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್)

ವಿಧಾನಪರಿಷತ್ ನಲ್ಲಿ ಸದ್ಯ ಬಿಜೆಪಿ ಸದಸ್ಯರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಒಂದು ಸ್ಥಾನದ ಉಪ ಚುನಾವಣೆ ಗೆದ್ದು, ತನ್ನ ಬಲ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ಪಕ್ಷಕ್ಕೆ ಒಂದು ಅವಕಾಶ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಒತ್ತಡದಲ್ಲಿದ್ದಾರೆ. (ಮೇಲ್ಮನೆಯಲ್ಲಿ ಬಿಜೆಪಿ ಪ್ರಾಬಲ್ಯ, ಸರ್ಕಾರಕ್ಕೆ ಇಕ್ಕಟ್ಟು)

ವೇಳಾಪಟ್ಟಿ ಪ್ರಕಟವಾದ ತಕ್ಷಣ ಮೈಸೂರು ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಆಯ್ಕೆಯಾದ ಅಭ್ಯರ್ಥಿಯ ಅಧಿಕಾರಾವಧಿ 2016 ಜನವರಿ 15ರವರೆಗೂ ಇರಲಿದೆ.

ಚುಣಾವಣೆ ವೇಳಾಪಟ್ಟಿ
ಜು.29 - ಅಧಿಸೂಚನೆ ಪ್ರಕಟ
ಆ.5 - ನಾಮಪತ್ರ ಸಲ್ಲಿಸಲು ಕಡೆಯ ದಿನ
ಆ.6 - ನಾಮಪತ್ರಗಳ ಪರಿಶೀಲನೆ
ಆ.8 - ನಾಮಪತ್ರ ಹಿಂಪಡೆಯಲು ಕಡೆಯ ದಿನ
ಆ.22 - ಮತದಾನ
ಆ.26 - ಮತ ಎಣಿಕೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+