ದಿಢೀರನೇ ದೆಹಲಿಗೆ ಹೊರಟ ಯಡಿಯೂರಪ್ಪ, ಶೋಭಾ

ಸೋಮವಾರ ಸಂಜೆ ಯಡಿಯೂರಪ್ಪ ಅವರು ತಮ್ಮ ಆಪ್ತರಾದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಮತ್ತು ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಅವರೊಂದಿಗೆ ದೆಹಲಿಗೆ ತಲುಪಿದ್ದಾರೆ.
ಆದರೆ ಮಂಗಳವಾರ ತಮ್ಮ ಇಷ್ಟ ದೇವತೆ ವೈಷ್ಣೋದೇವಿ ದರ್ಶನ ಪಡೆಯುವುದು ಈ ಭೇಟಿಯ ಪ್ರಮುಖ ಉದ್ದೇಶ ಎಂದು ಹೇಳಿದ್ದಾರೆ. ಈ ಮಧ್ಯೆ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರನ್ನೂ ಭೇಟಿ ಮಾಡುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ತಮ್ಮ ವಿರುದ್ಧ ನ್ಯಾಯಾಲಯದ ವಿವಿಧ ಹಂತಗಳಲ್ಲಿರುವ ಪ್ರಕರಣಗಳ ಬಗ್ಗೆ ಹಿರಿಯ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಕೋರುವ ಉದ್ದೇಶವೂ ಇದೆ ಎಂದು ತಿಳಿದು ಬಂದಿದೆ.












Click it and Unblock the Notifications