ವೀರಶೈವ ರಾಜಕಾರಣಿಗಳಿಗೆ ಗುರುವಾರ ಸನ್ಮಾನ
ಬೆಂಗಳೂರು, ಜು.24 : ಅಖಿಲ ಭಾರತ ವೀರಶೈವ ಮಹಾಸಭೆಯು ಸಮುದಾಯದ ಜನ ಪ್ರತಿನಿಧಿಗಳನ್ನು ಗುರುವಾರ ಸನ್ಮಾನಿಸಲಾಗುತ್ತದೆ. ಕರ್ನಾಟಕ, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರದ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರತಿಕಾ ಪ್ರಕಟಣೆ ಹೊರಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ಜುಲೈ 25ರ ಗುರುವಾರ, ಸಂಜೆ 5.30ಕ್ಕೆ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ನಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಸಮುದಾಯದ ಜನರು ಹೆಚ್ಚನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದೆ.

ಸಮಾರಂಭದ ದಿವ್ಯ ಸಾನಿಧ್ಯವನ್ನು ಡಾ.ಶಿವಕುಮಾರ ಮಹಾಸ್ವಾಮಿಗಳು, ಡಾ.ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿಗಳು, ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮುಂತಾದವರು ವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ವಹಿಸಲಿದ್ದಾರೆ.
ಸಮಾರಂಭದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ವೀರಶೈವ-ಲಿಂಗಾಯತ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಮತ್ತು ರಾಜ್ಯಸಭಾ ಸದ್ಯಸ್ಯರು ಪಾಲ್ಗೊಳ್ಳಲಿದ್ದಾರೆ.
ಎಲ್ಲಾ ರಾಜ್ಯಗಳ ವೀರಶೈವ-ಲಿಂಗಾಯತ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಸಮಾರಂಭಕ್ಕೂ ಮೊದಲು ಸಂಜೆ 5 ಗಂಟೆಯಿಂದ ವಚನ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.












Click it and Unblock the Notifications