ಮಾಜಿ ಶಾಸಕನ ಮನೆಯಿಂದ 10 ಲಕ್ಷ ದರೋಡೆ

ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮುತ್ಯಾಲನಗರದಲ್ಲಿರುವ ಶಾಸಕನ ಮನೆಗೆ ಆಗಮಿಸಿದ ಮೂವರು ಮುಸುಕು ಧಾರಿಗಳು ಮನೆಯವರಿಗೆ ಬೆದರಿಸಿ ಹಣ 10 ಲಕ್ಷ ದೋಚಿದ್ದಾರೆ. ಅಮರೇಶ್ ಅವರ ಪೆಟ್ರೋಲ್ ಬಂಕ್ ಗೆ ಸಂಬಂಧಿಸಿದ 10 ಲಕ್ಷ ಹಣವನ್ನು ಬಂಕ್ ನೌಕರ ಶೇಖರ್ ಬ್ಯಾಂಕಿಗೆ ತೆಗೆದುಕೊಂಡು ಹೋಗುತ್ತಿದ್ದರು.
ಈ ಸದಂರ್ಭದಲ್ಲಿ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ತಕ್ಷಣ ಶೇಖರ್ ಅಮರೇಶ್ ಮನೆಗೆ ವಾಪಸ್ ಬಂದಿದ್ದಾರೆ. ಮನೆಗೂ ಧಾವಿಸಿದ ದುಷ್ಕರ್ಮಿಗಳು, ಅಲ್ಲಿದ್ದವರಿಗೆ ಬೆದರಿಸಿ ಹಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿವೈಎಸ್‌ಪಿ ಸಿದ್ರಾಮಪ್ಪ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಒಂಟಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿನ್ನಪ್ಪನಹಳ್ಳಿ ನಿವಾಸಿಯಾದ ಗಾಯತ್ರಿ (28) ಅವರನ್ನು ಅಪಾರ್ಟ್ ಮೆಂಟ್ ನಲ್ಲಿ ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರ : ಲೋಕಾಯುಕ್ತ ವೈ.ಭಾಸ್ಕರರಾವ್ ಅವರು ಸೋಮವಾರ ಕೋಲಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಖಾಲಿ ಹಾಜರಿ ಪುಸ್ತಕಗಳು ಅವರಿಗೆ ಶುಭ ಕೋರಿವೆ. ಕಚೇರಿಗಳ ಅವ್ಯವಸ್ಥೆ ಕಂಡು ಲೋಕಾಯುಕ್ತರು ಗರಂ ಆಗಿದ್ದಾರೆ.
ಸೋಮವಾರ ಬೆಳಗ್ಗೆ ಕೋಲಾರ ಜಿಲ್ಲಾಸ್ಪತ್ರೆ, ಸರ್ಕಾರಿ ಬಾಲಕರ ಕಾಲೇಜು ಮುಂತಾದವುಗಳಿಗೆ ಭೇಟಿ ನೀಡಿದ ಲೋಕಾಯುಕ್ತರು, ಸಿಬ್ಬಂದಿ ಗೈರು ಹಾಜರಿ ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಾಲಕರ ಕಾಲೇಜಿನಲ್ಲಿ 79 ಸಿಬ್ಬಂದಿಗಳ ಪೈಕಿ 75 ಸಿಬ್ಬಂದಿ ಗೈರು ಹಾಜರಾಗಿದ್ದು ಭೇಟಿಯ ವೇಳೆ ಪತ್ತೆಯಾಯಿತು.
ಬೆಂಗಳೂರು : ನಮ್ಮ ಮೆಟ್ರೋ ಕಾಮಗಾರಿ ಅವಘಡದಿಂದ ಭಾನುವಾರ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿರುವ ಬೆನ್ನಲ್ಲೆ ಸೋಮವಾರ ಗೊರಗುಂಟೆ ಪಾಳ್ಯ ಬಳಿ, ಮರದ ತುಂಡು ಬಿದ್ದು, ಬೈಕ್ ಸವಾರರೊಬ್ಬರು ಗಾಯಗೊಂಡಿದ್ದಾರೆ.
ಇದರಿಂದ ಸ್ಥಳೀಯರು ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ಕಾಮಗಾರಿ ಸ್ಥಗಿತಗೊಳಿಸಿದರು. ಸವಾರನ ತೋಳು. ಕೈಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ ಎಂಸಿ ಯಾರ್ಡ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆ ಹಿಂಪಡೆಯವಂತೆ ಮನವಿ ಮಾಡಿದ್ದಾರೆ.
ಕೊಪ್ಪಳ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಪಲ್ಟಿ ಹೊಡೆದ ಪರಿಣಾಮ 11 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಅರಕೇರಿ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.












Click it and Unblock the Notifications