ಆವೇಶದಲ್ಲಿ ಪತ್ನಿಯ ದಾರುಣ ಹತ್ಯೆ ಮಾಡಿ ಪತಿ ನೇಣಿಗೆ

ಪಶ್ಚಾತ್ತಾಪವೋ/ ಹೆದರಿಕೆಯೋ ತಾನೂ ನೇಣು ಹಾಕಿಕೊಂಡು ಇಹಲೋಕದ ವ್ಯಾಪಾರ ಮುಗಿಸಿ, ಕೊನೆಗೆ ಸಾವಿನಲ್ಲಾದರೂ ಪತ್ನಿಯನ್ನು ಅನುಸರಿಸಿ ಪತ್ನಿಯ ಹಿಂದೆ ಹೆಜ್ಜೆ ಹಾಕಿದ ಪತಿರಾಯ.
ಇದು ವಾಸ್ತವದಲ್ಲಿ ರಾಜಧಾನಿಯಲ್ಲಿ ಮಂಗಳವಾರ ನಡೆದಿರುವ ಘಟನೆ. ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯ ಶ್ರೀಕಂಠೇಶ್ವರ ನಗರದ ಶಂಕರನಗರ ನಿವಾಸಿ ನಂಜಪ್ಪ (65) ಪತ್ನಿ ಶಶಿಕಲಾರನ್ನು (50) ಕೊಲೆ ಮಾಡಿ, ತಾವೂ ನೇಣು ಬಿಗಿದುಕೊಂಡವರು.
ದಂಪತಿಗೆ ಇಬ್ಬರು ಹೆಣ್ಣುಮಕ್ಕಳು, ಒಬ್ಬ ಮಗ ಇದ್ದಾನೆ. ಮೂವರಿಗೂ ಮದುವೆಯಾಗಿದೆ. ಮಗ-ಸೊಸೆ ಇವರ ಜತೆಯಲ್ಲಿಯೇ ಇದ್ದಾರೆ.
ಇಂದು ಬೆಳಗ್ಗೆ ಮಗ-ಸೊಸೆ ಹೊರಗೆ ಹೋಗಿದ್ದಾಗ ದಂಪತಿ ನಡುವೆ ಸಣ್ಣ ವಿಷಯಕ್ಕೆ ಜಗಳ ಆರಂಭವಾಗಿದೆ. ಆದರೆ ಅದು ವಿಕೋಪಕ್ಕೆ ತಿರುಗಿದೆ. ಒಂದು ಹಂತದಲ್ಲಿ ನಂಜಪ್ಪ ದೊಣ್ಣೆಯಿಂದ ಪತ್ನಿ ತಲೆಗೆ ಹೊಡೆದಿದ್ದಾನೆ. ಪೆಟ್ಟಿನಿಂದಾಗಿ ಪತ್ನಿ ಶಶಿಕಲಾ @ ಪುಷ್ಪಲತಾ ಕುಸಿದುಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದರಿಂದ ಹೆದರಿದ ನಂಜಪ್ಪ ತಡಮಾಡದೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನದ ವೇಳೆಗೆ ಕುಟುಂಬದ ಸದಸ್ಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications