ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವೂದ್ ಜತೆ ಶ್ರೀಶಾಂತ್ ಮೇಲೂ ಚಾರ್ಜ್ ಶೀಟ್

By Mahesh
|
Google Oneindia Kannada News

ನವದೆಹಲಿ, ಜು.30: ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಂಗಳವಾರ ಭೂಗತ ಪಾತಕಿಗಳಾದ ದಾವೂದ್ ಇಬ್ರಾಹಿಂ, ಛೋಟಾ ಶಕಿಲ್, ಕ್ರಿಕೆಟ್ ಆಟಗಾರ ಶ್ರೀಶಾಂತ್ ಸೇರಿದಂತೆ 30 ಮಂದಿ ಮೇಲೆ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದಾವೂದ್ ಹಾಗೂ ಛೋಟಾ ಶಕೀಲ್ ಸ್ಪಾಟ್ ಫಿಕ್ಸಿಂಗ್ ನ ಪ್ರಮುಖ ರೂವಾರಿಗಳಾಗಿದ್ದು, ಕ್ರಿಕೆಟಿಗ ಶ್ರೀಶಾಂತ್ ಅದನ್ನು ಕಾರ್ಯಗತಗೊಳಿಸಿದ್ದ. ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ನಲ್ಲಿ ಪಾಕಿಸ್ತಾನದ ಬುಕ್ಕಿಗಳು ಭಾರತದ ಬುಕ್ಕಿಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದು ದೆಹಲಿ ಪೊಲೀಸರು ದೂರಿದ್ದಾರೆ.

IPL Fixing Chargesheet Details: Dawood, Sreesanth in trouble

ಇನ್ನು ಪ್ರಕರಣ ಸಂಬಂಧ ಶ್ರೀಶಾಂತ್ ಸೇರಿದಂತೆ ಇತರ 20 ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕೋರ್ಟಿಗೆ ಮನವಿ ಮಾಡಲಾಗುವುದು ಎಂದು ದೆಹಲಿ ವಿಶೇಷ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವತ್ಸಾವ್ ಅವರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಾಜಸ್ಥಾನ ರಾಯಲ್ಸ್ ತಂಡದ ಮೂವರು ಆಟಗಾರರಾದ ಶ್ರೀಶಾಂತ್, ಅಂಕೀತ್ ಚೌವ್ಹಾಣ್ ಮತ್ತು ಅಜಿತ್ ಚಾಂಡಿಲ ಅವರನ್ನು ಕಳೆದ ಮೇ 16ರಂದು ಮುಂಬೈಯಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ನಂತರ ಶ್ರೀಶಾಂತ್ ಹಾಗೂ ಚೌವ್ಹಾಣ್ ಜಾಮೀನನ ಮೇಲೆ ಬಿಡುಗಡೆಯಾಗಿದ್ದರು. ಆದರೆ ಮತ್ತೊರ್ವ ಆಟಗಾರ ಚಾಂಡಿಲ ಮಾತ್ರ ಇನ್ನು ತಿಹಾರ್ ಜೈಲಲ್ಲೇ ಇದ್ದಾರೆ.

ಚಾರ್ಚ್ ಶೀಟ್ : ದೆಹಲಿ ಪೊಲೀಸ್ ಆಯುಕ್ತ ನೀರಜ್ ಕುಮಾರ್ ನೇತೃತ್ವದ ತಂಡ ದೋಷಾರೋಪಣ ಪಟ್ಟಿ ಸಿದ್ಧಪಡಿಸಿದ್ದು, ಜು.31 ರಂದು ನೀರಜ್ ಕುಮಾರ್ ಅವರು ನಿವೃತ್ತಿ ಹೊಂದುತ್ತಿದ್ದು ಅದಕ್ಕಿಂತ ಮೊದಲು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವವರ ಮೇಲೆ ಮಹಾರಾಷ್ಟ್ರ ಅಪರಾಧ ನಿಯಂತ್ರಣ ಕಾಯ್ದೆ (ಮೊಕಾ) ಪ್ರಕಾರ ದೂರು ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 420, 409 ಹಾಗೂ 120 (ಬಿ) ಹಾಗೂ ಮೋಕಾ ಸೆಕ್ಷನ್ 6 ಮತ್ತು 8 ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ಶ್ರೀಶಾಂತ್ ಗೆಳೆಯ ಅಭಿಷೇಕ್ ಶುಕ್ಲಾ ಅವರನ್ನು ಮೋಕಾ ಅಡಿಯಲ್ಲಿ ಆರೋಪಿಯನ್ನಾಗಿಸಿಲ್ಲ. ಪಾಕಿಸ್ತಾನ, ದುಬೈ ಹಾಗೂ ಇಂಗ್ಲೆಂಡ್ ನಿಂದ ದಾವೂದ್ ಇಬ್ರಾಹಿಂ ಹಾಗೂ ಛೋಟಾ ಶಕೀಲ್ ಸ್ಪಾಟ್ ಫಿಕ್ಸಿಂಗ್ ನಿಯಂತ್ರಿಸುತ್ತಿದ್ದರು. ಪಾಕಿಸ್ತಾನ ಬುಕ್ಕಿ ಸಲ್ಮಾನ್, ದುಬೈ ಬುಕ್ಕಿ ಜಾವೇದ್ aka ಡಾಕ್ಟರ್ aka ಜಾವೇದ್ ಛೂಟನಿ ಅವರು ಭಾರತದ ಬುಕ್ಕಿಗಳಾದ ರಮೇಶ್ ವ್ಯಾಸ್ ಹಾಗೂ ಟಿಂಕು ಮಂಡಿ ಮೂಲಕ ಫಿಕ್ಸಿಂಗ್ ಮಾಡುತ್ತಿದ್ದರು ಎಂದು ಅರೋಪಪಟ್ಟಿಯಲ್ಲಿ ಹೇಳಲಾಗಿದೆ.

English summary
As it was speculated earlier, underworld don Dawood Ibrahim and Indian cricketers -- S Sreesanth, Ajit Chandila, Ankeet Chavan and many others have been named in the charge-sheet which would be submitted by Delhi Police
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X