ಸೆಪ್ಟೆಂಬರ್ ನಲ್ಲಿ ಮೋದಿ ಬೆಂಗಳೂರಿಗೆ ಬರ್ತಾರೆ

ananth kumar
ಬೆಂಗಳೂರು, ಜು.31 : ರಾಜ್ಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಶಕ್ತಿ ತುಂಬಲು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ ನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಹೇಳಿದ್ದಾರೆ.

ಮಂಗಳವಾರ ರಾಜ್ಯ ಬಿಜೆಪಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷ-ಪ್ರಧಾನ ಕಾರ್ಯದರ್ಶಿಗಳ ವಿಶೇಷ ಸಭೆಯಲ್ಲಿ ಮಾತನಾಡಿದ ಅನಂತ್ ಕುಮಾರ್, ನರೇಂದ್ರ ಮೋದಿ ಅವರ ಆಗಮನದ ನಂತರ ಪಕ್ಷದ ಕಾರ್ಯಕರ್ತರಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಉತ್ಸಾಹ ಹೆಚ್ಚಲಿದೆ ಎಂದರು.

ಬೆಂಗಳೂರಿನಲ್ಲಿ ಮೋದಿ ಅವರ ಕಾರ್ಯಕ್ರಮಗಳನ್ನು ಮೊದಲು ಹಮ್ಮಿಕೊಳ್ಳಲಾಗುವುದು. ನಂತರ ರಾಜ್ಯದ ಇತರ ಭಾಗಗಳಲ್ಲೂ ಸಮಾವೇಶಗಳನ್ನು ನಡೆಸಿ, ಕಾರ್ಯಕರ್ತರಿಗೆ ಚುನಾವಣಾ ಉತ್ಸಾಹ ತುಂಬಲಾಗುವುದು. ದೇಶದ ತುಂಬಾ ಕಾಂಗ್ರೆಸ್ ವಿರೋಧಿ ಅಲೆ ಇದೆ. ಲೋಕಸಭೆ ಚುನಾವಣೆಯನ್ನು ಎದುರಿಸಲು ಕರ್ನಾಟಕ ಬಿಜೆಪಿ ಶೀಘ್ರದಲ್ಲೇ ಕಾರ್ಯತಂತ್ರ ರೂಪಿಸಲಿದೆ ಎಂದು ಅನಂತ್ ಕುಮಾರ್ ಹೇಳಿದರು.

ಉಪ ಚುನಾವಣೆ ಮೈತ್ರಿ : ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ದ ಎಂದು ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.(ಚುನಾವಣೆ ವೇಳಾಪಟ್ಟಿ)

ಜೆಡಿಎಸ್ ಪಕ್ಷದಿಂದ ಮೈತ್ರಿ ಮಾಡಿಕೊಳ್ಳುವ ಕುರಿತು ಪ್ರಸ್ತಾವನೆ ಬಂದರೆ ಆ ಕುರಿತು ಆಲೋಚಿಸಲಾಗುವುದು ಎಂದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಜೆಡಿಎಸ್ ಜೊತೆ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂಬ ಮಾತನ್ನು ತಳ್ಳಿ ಹಾಕಿದರು.

ಮೈತ್ರಿ ಸೂತ್ರ : ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎರಡು ಲೋಕಸಭೆ ಸ್ಥಾನಗಳನ್ನು ಉಳಿಸಿಕೊಳ್ಳಲು ಜೆಡಿಎಸ್ ಮುಂದಾಗಿದೆ. ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲ ನೀಡಿದರೆ, ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲ ನೀಡಲು ಜೆಡಿಎಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+