ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರು : ಬೇಕರಿಯಲ್ಲಿ ಸಿಲಿಂಡರ್ ಸ್ಫೋಟ

|
Google Oneindia Kannada News

Karnataka
ಬೆಂಗಳೂರು, ಆ.1 : ಬೇಕರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಂಗಡಿಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರಿನ ಕ್ಯಾತ್ಸಂದ್ರವೃತದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಘಟನೆಯಿಂದಾಗಿ ಬೇಕರಿ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಅಂಗಡಿ ಮಾಲೀಕ ಅಭಿಷೇಕ್, ಅವರ ಪತ್ನಿ ಸರಳ ಮತ್ತು ಬೇಕರಿಗೆ ಬಂದಿದ್ದ ಇಬ್ಬರು ಗ್ರಾಹಕರು ಘಟನೆಯಿಂದ ಗಾಯಗೊಂಡಿದ್ದಾರೆ. ಎಲ್ಲರನ್ನು ತಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಸಿಲಿಂಡರ್ ಸೋರಿಕೆ ಆಗುತ್ತಿತ್ತು, ಆ ಸಮಯಕ್ಕೆ ಬಂದ ಗ್ರಾಹಕ ಸಿಗರೇಟ್ ಸೇದಲು ಬೆಂಕಿ ಹಚ್ಚಿದ್ದರಿಂದ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಹಾಸನ : ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಬಳಿ ಗ್ಯಾಸ್‌ ಟ್ಯಾಂಕರ್ ಗುರುವಾರ ಮಧ್ಯಾಹ್ನ ಪಲ್ಟಿಯಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸಕಲೇಶಪುರ-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗ್ಯಾಸ್‌ ಟ್ಯಾಂಕರ್ ಪಲ್ಟಿಯಾಗಿದ್ದು, ಮಂಗಳೂರು, ಬೆಂಗಳೂರಿಗೆ ತೆರಳುವ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಅಪಘಾತದಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 108 ಸಿಬ್ಬಂದಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದ್ದು, ಸತ್ಯಾಗ್ರಹ ನಿತರರಲ್ಲಿ ಆರು ಮಂದಿ ಅಸ್ವಸ್ಥಗೊಂಡಿದ್ದಾರೆ. ಗುರುವಾರ ಸಹ ಸರ್ಕಾರ ಉಪವಾಸ ನಿರತರೊಂದಿಗೆ ಯಾವುದೇ ಮಾತುಕತೆಗೆ ಮುಂದಾಗಿಲ್ಲ.

ಬೆಂಗಳೂರು : ಬಾರ್ ನಲ್ಲಿ ಮದ್ಯ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ ಹುಡುಗನನ್ನು ದುರ್ಷರ್ಮಿಗಳು ಕೊಲೆ ಮಾಡಿರುವ ಘಟನೆ ಬ್ರಿಗೇಡ್ ರಸ್ತೆಯಲ್ಲಿ ಗುರುವಾರ ಮುಂಜಾನೆ 3 ಗಂಟೆ ವೇಳೆಗೆ ನಡೆದಿದೆ. ಮೃತ ವ್ಯಕ್ತಿಯನ್ನು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ನರೇಂದ್ರ ಎಂದು ಗುರುತಿಸಲಾಗಿದೆ. ಅಶೋಕ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು : ಎರಡು ಲೋಕಸಭೆ, ಒಂದು ರಾಜ್ಯಸಭೆ ಹಾಗೂ ಮೂರು ವಿಧಾನಪರಿಷತ್ ಉಪ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಶುಕ್ರವಾರ ನವದೆಹಲಿಗೆ ತೆರಳಿದ್ದಾರೆ. ಹೈ ಕಮಾಂಡ್ ನಾಯಕರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಜೊತೆ ಭೇಟಿ ಮಾಡಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಿದ್ದಾರೆ. ಶನಿವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

English summary
Super fast news bites from interior Karnataka : Gas Tanker Accident at Sakaleshpura national highway 48. Bangalore-Mangalore vehicle stopped from accident. Bar worker murder in Bangalore brigade road on Thursday, August 1 early morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X