ಬಿಹಾರ : ನೀರು ಕುಡಿದ 50 ಮಕ್ಕಳು ಅಸ್ವಸ್ಥ

ಶುಕ್ರವಾರ ಆರ್ಯಲ್ ಮತ್ತು ಜಮುಯು ಜಿಲ್ಲೆಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬೋರ್ ವೆಲ್ ನೀರು ಕುಡಿದ ನಂತರ ಹೊಟ್ಟೆ ಕಾಣಿಸಿಕೊಂಡಿದೆ. ಕೆಲವು ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಮಕ್ಕಳಿಗೆ ಮೊದಲು ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಹೊಟ್ಟೆ ನೋವು ಹೆಚ್ಚಾದ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿಯುವ ನೀರಿನಲ್ಲಿ ವಿಷಕಾರಕ ಅಂಶಗಳು ಕಂಡು ಬಂದಿದ್ದರಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ನೂರಾರು ಸ್ಥಳೀಯರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಜಮಾಯಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಸಿಎಂ ಪ್ರತಿಕ್ರಿಯೆ : ಘಟನೆಯ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಮಧ್ಯಾಹ್ನ ಬಿಸಿಯೂಟ ಸೇವಿಸಿ ಮಕ್ಕಳು ಮೃತಪಟ್ಟ ನಂತರ, ಸರ್ಕಾರ ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ವಹಿಸಿದೆ. (ಬಿಸಿಯೂಟ ದುರಂತ)
ಬೋರ್ ವೆಲ್ ನೀರಿಗೆ ವಿಷಕಾರಿ ಅಂಶಗಳು ಹೇಗೆ ಸೇರ್ಪಡೆಗೊಂಡವು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ನಂತರ ತಪ್ಪಿದಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.












Click it and Unblock the Notifications