ಸಾಲು-ಸಾಲು ರಜೆಗೆ ಹೆಚ್ಚುವರಿ ಬಸ್ ಸೌಲಭ್ಯ

ಬುಧವಾರ ಪತ್ರಿಕಾಪ್ರಕಟಣೆ ಹೊರಡಿಸಿರುವ ಕೆಎಸ್ಆರ್ ಟಿಸಿ, 300ರಿಂದ 350 ಬಸ್ ಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ಓಡಿಸಲಾಗುವುದು ಎಂದು ತಿಳಿಸಿದೆ. ರಂಜಾನ್ ಮತ್ತು ಎರಡು ದಿನಗಳ ರಜೆಯ ಹಿನ್ನಲೆಯಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ವಿಶೇಷ ಬಸ್ ಗಳು, ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾಡ, ರಾಯಚೂರು, ಗುಲ್ಬರ್ಗಾ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಪ್ರಯಾಣ ಬೆಳೆಸಲಿವೆ.
ಮೈಸೂರು ರಸ್ತೆಯ ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ ವಿಶೇಷ ಬಸ್ ಗಳು ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿಗೆ ಪ್ರಯಾಣಿಸಲಿವೆ.
ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರೆ, ಜಯನಗರ 4ನೇ ಬ್ಲಾಕ್, ನವರಂಗ್, ವಿಜಯನಗರ, ಬನಶಂಕರಿ ಬಸ್ ನಿಲ್ದಾಣದಿಂದ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯಕ್ಕೆ ಬಸ್ ಸೇವೆ ಒದಿಸಲು ಕೆಎಸ್ಆರ್ ಟಿಸಿ ವ್ಯವಸ್ಥೆ ಮಾಡಿದೆ.
ಶಾಂತಿನಗರ ಡಿಪೋ : ಹೊರ ರಾಜ್ಯಗಳಿಗೆ ಪ್ರಯಾಣಿಸುವವರು ಶಾಂತಿನಗರ ಬಸ್ ನಿಲ್ದಾಣಕ್ಕೆ ತೆರಳಬೇಕು. ಶಾಂತಿನಗರದಿಂದ ಮಧುರೈ, ಕುಂಬಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ನಗರಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಬುಕ್ಕಿಂಗ್ : ವಿಶೇಷ ಬಸ್ ಗಳಲ್ಲಿ ಸೀಟನ್ನು ಕಾಯ್ದಿರಿಸಲು ಪ್ರಯಾಣಿಕರು www.ksrtc.in. ವೆಬ್ ಸೈಟ್ ಗೆ ಭೇಟಿ ನೀಡಬಹುದು. ವೆಬ್ ಸೈಟ್ ಮೂಲಕ ಕರ್ನಾಟಕ ಮತ್ತು ಹೊರ ರಾಜ್ಯಗಳಿಗೆ ಸಂಚರಿಸುವ ವಿಶೇಷ ಬಸ್ ಗಳಲ್ಲಿ ಸೀಟು ಕಾಯ್ದರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications