ಬಿಬಿಎಂಪಿ ಮೇಯರ್ ಚುನಾವಣೆಗೆ ಹೈಕೋರ್ಟ್ ಅಸ್ತು

high court
ಬೆಂಗಳೂರು, ಆ.8 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಹುದ್ದೆಯ ಮೀಸಲಾತಿ ಗೊಂದಲ ಬಗೆಹರಿದಿದೆ. ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮತ್ತು ಉಪ ಮೇಯರ್ ಹುದ್ದೆಯನ್ನು ಎಸ್ ಟಿ ವರ್ಗಕ್ಕೆ ನಿಗಿಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.

ಗುರುವಾರ ಪಾಲಿಕೆ ಸದಸ್ಯರಾದ ಲೋಕೇಶ್, ಇಂದಿರಾ ಮುಂತಾದವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮತ್ತು ಉಪ ಮೇಯರ್ ಹುದ್ದೆಯನ್ನು ಎಸ್ ಟಿ ಮಹಿಳೆಗೆ ನಿಗದಿಗೊಳಿಸಿ ಆದೇಶ ಹೊರಡಿಸಿತು. ಇದರಿಂದ ಮೇಯರ್ ಚುನಾವಣೆಗೆ ಇದ್ದ ಅಡ್ಡಿ ಬಗೆಹರಿದಂತಾಗಿದೆ.

ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕಾಗಿ ಏ. 27ಕ್ಕೆ ಚುನಾವಣೆ ನಡೆಯಬೇಕಿತ್ತು. ಆದರೆ, ಮೇಯರ್ ಅಥವ ಉಪ ಮೇಯರ್ ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಎಸ್‌ಟಿ ಸಮುದಾಯಕ್ಕೆ ಮೀಸಲಿಡಬೇಕು ಎಂದು ಲೋಕೇಶ್ ಮತ್ತು ಇಂದಿರಾ ಮುಂತಾದವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ದರಿಂದ ಚುನಾವಣೆ ತಡವಾಗಿತ್ತು.

ಬಿಬಿಎಂಪಿ ಮೇಯರ್ ಅಧಿಕಾರಾವಧಿ ಪೂರ್ಣಗೊಂಡಿದ್ದರೂ ಡಿ.ವೆಂಕಟೇಶಮೂರ್ತಿ ಉಸ್ತುವಾರಿ ಮೇಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 2013-14ನೇ ಸಾಲಿನ ಬಜೆಟ್ ಮಂಡಿಸಿದ್ದರು.

ಮೀಸಲಾತಿ ಗೊಂದಲ : ಫೆ.8, 2013ರಂದು ರಾಜ್ಯ ಸರ್ಕಾರ 2013ನೇ ಸಾಲಿಗೆ ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ಅಧಿಸೂಚನೆ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೊಸ ಅರ್ಜಿ ಸಲ್ಲಿಸಬಹದು ಎಂದು ನ್ಯಾಯಾಲಯ ಆದೇಶ ನೀಡಿತ್ತು.

ಸರ್ಕಾರದ ಈ ಮೀಸಲಾತಿಯನ್ನು ಪ್ರಶ್ನಿಸಿ ಒಂದು ಸ್ಥಾನವನ್ನು ಎಸ್ ಟಿ ವರ್ಗಕ್ಕೆ ಮೀಸಲಿಡಬೇಕು ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮೇಯರ್ ಹುದ್ದೆ ಸಾಮಾನ್ಯ ವರ್ಗಕ್ಕೆ, ಉಪ ಮೇಯರ್ ಹುದ್ದೆಯನ್ನು ಎಸ್ ಟಿ ವರ್ಗದ ಮಹಿಳೆಗೆ ಮೀಸಲಾಗಿಟ್ಟು, ಆದೇಶ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+