ರಮ್ಯಾ ವಿವಾದ : ಶ್ರೀನಿವಾಸ್ ವಿರುದ್ಧ ದೂರು ದಾಖಲು
ಮಂಡ್ಯ, ಆ.10 : "ಕಾಂಗ್ರೆಸ್ ಅಭ್ಯರ್ಥಿ ನಟಿ ರಮ್ಯಾ ಪ್ರನಾಳ ಶಿಶು" ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಮಾಜಿ ಶಾಸಕ ಎಂ.ಶ್ರೀನಿವಾಸ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಈ ಹೇಳಿಕೆ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ.
ರಮ್ಯಾ ಅವರನ್ನು ವೈಯಕ್ತಿಕವಾಗಿ ಟೀಕಿಸುವ ಮೂಲಕ ಶ್ರೀನಿವಾಸ್ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಎಸ್.ಸತ್ಯಾನಂದ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಅವರಿಗೆ ಶನಿವಾರ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಶ್ರೀನಿವಾಸ್ ಮತ್ತು ಸಿ.ಎಸ್.ಪುಟ್ಟರಾಜು ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಮುಂತಾದ ನಾಯಕರು ರಮ್ಯಾ ವಿರುದ್ಧ ಶ್ರೀನಿವಾಸ್ ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.
ರಮ್ಯಾ ವಿರುದ್ಧ ನೀಡಿರುವ ವೈಯಕ್ತಿಕ ಹೇಳಿಕೆಗಳನ್ನು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ರಾತ್ರಿ ಮಂಡ್ಯದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಶನಿವಾರ ರಮ್ಯಾ ಅವರ ವಿರುದ್ಧ ನೀಡಿರುವ ಹೇಳಿಕೆಗಳ ಕುರಿತು ನಡೆಯುತ್ತಿರುವ ವಿದ್ಯಮಾನಗಳ ಮಾಹಿತಿ ಇಲ್ಲಿದೆ.

ಎಂ.ಶ್ರೀನಿವಾಸ್ ವಿರುದ್ಧ ದೂರು
ರಮ್ಯಾ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದ ಜೆಡಿಎಸ್ ಮಾಜಿ ಶಾಸಕ ಎಂ.ಶ್ರೀನಿವಾಸ್ ವಿರುದ್ಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ಟಿ.ಎಸ್.ಸತ್ಯಾನಂದ ದೂರು ನೀಡಿದ್ದಾರೆ. ದೂರಿನ ಅನ್ವಯ, ಡಿಸಿ ಬಿ.ಎಸ್.ಕೃಷ್ಣಯ್ಯ ಎಂ.ಶ್ರೀನಿವಾಸ್ ಮತ್ತು ಸಿ.ಎಸ್.ಪುಟ್ಟರಾಜು ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
(67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ)

ಅನಿತಾ ಕುಮಾರಸ್ವಾಮಿ ಕ್ಷಮೆ ಯಾಚೆನೆ
ಎಂ.ಶ್ರೀನಿವಾಸ್ ಹೇಳಿಕೆಗೆ ಪಕ್ಷದ ವತಿಯಿಂದ ನಾನು ಕ್ಷಮೆ ಯಾಚಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮಹಿಳೆ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡುವುದು ತಪ್ಪು. ಇದಕ್ಕಾಗಿ ನಾನು ಕ್ಷಮೆ ಯಾಚಿಸುವುದಾಗಿ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಗರಂ
ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಪರವಾಗಿ ವೈಯಕ್ತಿಕ ಟೀಕೆ ಮಾಡಿರುವುದನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ನೀತಿ ಇಲ್ಲದ, ಚಾರಿತ್ರ್ಯ ವಧೆ ಮಾಡುವ ಇಂತಹ ಹೇಳಿಕೆ ನೀಡಿರುವುದನ್ನು ಅವರು ಖಂಡಿಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ
ರಮ್ಯಾ ವಿರುದ್ಧ ಎಂ.ಶ್ರೀನಿವಾಸ್ ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಡ್ಯದಲ್ಲಿ ರಾತ್ರಿ ಹೆದ್ದಾರಿ ತಡೆದು, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. (ಚಿತ್ರ : ರಾಜೇಶ್ ಕೊಂಡಾಪುರ)

ಪ್ರತಿಕೃತಿ ದಹನ
ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದವರು ರಮ್ಯಾ ವಿರುದ್ಧ ಶ್ರೀನಿವಾಸ್ ನೀಡಿರುವ ಹೇಳಿಕೆ ಖಂಡಿಸಿ, ಪ್ರವಾಸಿ ಮಂದಿರದ ಬಳಿ ಎಂ.ಶ್ರೀನಿವಾಸ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.












Click it and Unblock the Notifications