ಸಮಾಜವಾದಕ್ಕೆ ಅಂಕಿತ ಬಿದರಿ ಕಾಂಗೈ ವಿರುದ್ಧ ವಾಗ್ದಾಳಿ
ಬೆಂಗಳೂರು, ಅಗಸ್ಟ್ 13: ಮಾಜಿ ಪೊಲೀಸ್ ಅಧಿಕಾರಿ ಶಂಕರ್ ಮಹಾದೇವ ಬಿದರಿ ಅವರು ಅಧಿಕೃತವಾಗಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸಮ್ಮುಖದಲ್ಲಿ ದೆಹಲಿಯಲ್ಲಿ ಇಂದು ಮಂಗಳವಾರ ಬಿದರಿ ಸೈಕಲ್ ಏರಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕದ ಮಾಜಿ ಡಿಐಜಿ ಶಂಕರ್ ಬಿದರಿ ಅವರು ಕಾಂಗ್ರೆಸ್ ಪಕ್ಷ ತನಗೆ ಅನ್ಯಾಯ ಮಾಡಿದೆ. ಮೋದ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಐಎಎಸ್ ಅಧಿಕಾರಿ ದುರ್ಗಾಶಕ್ತಿ ಅವರನ್ನು ಎತ್ತಂಗಡಿ ಮಾಡಿ ವಿವಾದಕ್ಕೆ ಗುರಿಯಾಗಿರುವ ಸಮಾಜವಾದಿ ಪಕ್ಷಕ್ಕೆ ಮಾಜಿ ಐಪಿಎಸ್ ಬಿದರಿ ಅವರು ಸೇರ್ಪಡೆಯಾಗಿರುವುದು ಹಲವರ ಹುಬ್ಬೇರಿಸಿದೆ.

'ಐದು ವರ್ಷಗಳ ಕಾಲ ನನಗೆ ಯಾವುದೇ ಸ್ಥಾನಮಾನ ನೀಡದಿರಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಮುಂದಿನ ಲೋಕಸಭೆಗಾದರೂ ಟಿಕೆಟ್ ನೀಡಿ ಎಂದು ಕೇಳಿದ್ದೆ. ಅದಕ್ಕೂ ಅವರು ಸ್ಪಂದಿಸಲಿಲ್ಲ. ಇದರಿಂದ ನಾನು ನನ್ನ ರಾಜಕೀಯ ಜೀವನವನ್ನು ಹಾಳು ಮಾಡಿಕೊಳ್ಳಲು ಸಿದ್ಧವಾಗಿಲ್ಲ. ಹಾಗಾಗಿ ಅನಿವಾರ್ಯವಾಗಿ ಸಮಾಜವಾದಿ ಪಕ್ಷ ಸೇರಿಕೊಂಡಿದ್ದೇನೆ. ಯಾರ ವಿರುದ್ಧವೂ ವೈಯಕ್ತಿಕ ನಿಂದನೆಯಲ್ಲಿ ತೊಡಗಲಾರೆ' ಎಂದು ಮುಲಾಯಂ ಸಮ್ಮುಖದಲ್ಲಿ ಬಿದರಿ ಹೇಳಿದರು.
ಇದೇ ವೇಳೆ ಶಂಕರ್ ಬಿದರಿ ಅವರನ್ನು ಸಮಾಜವಾದಿ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಮುಲಾಯಂ ಸಿಂಗ್ ಪ್ರಕಟಿಸಿದರು.
ಇನ್ನು ಚನ್ನಪಟ್ಟಣ ಶಾಸಕ, ಎಸ್ಪಿ ಪಕ್ಷದ ಹಾಲಿ ರಾಜ್ಯಾಧ್ಯಕ್ಷ ಸಿಪಿ ಯೋಗೀಶ್ವರ್ ಅವರಿಗೆ ಪಕ್ಷದ ದಕ್ಷಿಣ ಭಾರತದ ಉಸ್ತುವಾರಿ ವಹಿಸಲಾಗಿದೆ ಎಂದು ತಿಳಿದುಬಂದಿದೆ. ನಿನ್ನೆಯೇ ಲಖ್ನೋ ತಲುಪಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಅವರು ಎಸ್ಪಿ ಪಕ್ಷದ ಮುಖಂಡರನ್ನು ಭೇಟಿ ಮಾಡಿದ್ದರು. ಅವರೊಂದಿಗೆ ಯೋಗೀಶ್ವರ್ ಮತ್ತು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರೂ ಸಹ ಇದ್ದರು.
67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications