ಸೆ.22 ರಂದು ಬೆಂಗಳೂರಿಗೆ ಮೋದಿ ಆಗಮನ

narendra modi
ಬೆಂಗಳೂರು, ಆ.13 : ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ ನಲ್ಲಿ ಎರಡು ದಿನಗಳ ಭೇಟಿಗಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಪಕ್ಷದ ನಾಯಕರು ಮೋದಿ ಕಾರ್ಯಕ್ರಮಗಳ ರೂಪುರೇಷೆ ತಯಾರಿಸುತ್ತಿದ್ದಾರೆ.

ಸೋಮವಾರ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ವಿಧಾನಪರಿಷತ್ ಮತ್ತು ರಾಜ್ಯಸಭಾ ಉಪ ಚುನಾವಣೆ, ನರೇಂದ್ರ ಮೋದಿ ಅವರ ಪ್ರವಾಸದ ಕುರಿತು ಚರ್ಚಿಸಲಾಗಿದೆ.

ನರೇಂದ್ರ ಮೋದಿ ಸೆ.22ರಂದು ಬೆಂಗಳೂರಿನಗೆ ಆಗಮಿಸಲಿದ್ದಾರೆ. ಒಟ್ಟು ಎರಡು ದಿನದ ಪ್ರವಾಸವನ್ನು ಮೋದಿ ಅವರು ಕೈಗೊಂಡಿದ್ದು, ಪಕ್ಷ ಸಂಘಟನೆ, ಲೋಕಸಭಾ ಚುನಾವಣೆ, ಪ್ರಚಾರ ತಂತ್ರಗಳ ಕುರಿತು ರಾಜ್ಯ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಸೆ.23ರಂದು ನರೇಂದ್ರ ಮೋದಿ ಅವರು ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಂಗಳೂರು ಅಥವ ಬೇರೆ ಯಾವ ಜಿಲ್ಲೆಯಲ್ಲಿ ಸಮಾವೇಶ ನಡೆಸಬೇಕು ಎಂದು ಪಕ್ಷದ ನಾಯಕರು ತೀರ್ಮಾನಿಸಲಿದ್ದಾರೆ.

ಸೋಮವಾರ ನಡೆದ ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಮುಂತಾದ ನಾಯಕರು ಪಾಲ್ಗೊಂಡಿದ್ದರು. ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಗೈರು ಹಾಜರಾಗಿದ್ದರಿಂದ ಮೋದಿ ಆಗಮನದ ಕುರಿತು ಮಾತ್ರ ಚರ್ಚಿಸಲಾಗಿದೆ. ಅವರ ಕಾರ್ಯಕ್ರಮಗಳನ್ನು ಎಲ್ಲಿ ಆಯೋಜಿಸಬೇಕು ಎಂಬ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಪಕ್ಷ ತೊರೆಯುವವರ ಬಗ್ಗೆ ಚರ್ಚೆ : ಸೋಮವಾರ ನಡೆದ ಸಭೆಯಲ್ಲಿ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಯಿಂದಾಗಿ ಕೆಲವು ಶಾಸಕರು ಪಕ್ಷ ತೊರೆಯುವ ಬಗ್ಗೆ ಮಾತನಾಡುತ್ತಿರುವ ಬಗ್ಗೆಯೂ ಗಂಭೀರ ಚರ್ಚೆ ನಡೆದಿದೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಶಾಸಕರ ಮನವೊಲಿಸಲು ತೀರ್ಮಾನಿಸಲಾಗಿಗೆ.

(67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+