ಸಂಸದ ಜಯಪ್ರಕಾಶ್ ಹೆಗ್ಡೆ ಆಪ್ತ ಸಹಾಯಕ ಆತ್ಮಹತ್ಯೆ

Suicide
ಚಿಕ್ಕಮಗಳೂರು, ಆ.7 : ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದ ಜಯಪ್ರಕಾಶ್ ಹೆಗ್ಡೆ ಅವರ ಆಪ್ತ ಸಹಾಯಕ ಜಗನ್ನಾಥ್ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಅವರ ಶವ ಪತ್ತೆಯಾಗಿದೆ.

ಜಯಪ್ರಕಾಶ್ ಹೆಗ್ಡೆ ಅವರ ಆಪ್ತ ಸಹಾಯಕರಾಗಿದ್ದ ಜಗನ್ನಾಥ್ (48) ಮಂಗಳವಾರ ರಾತ್ರಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು. ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ 4 ರಲ್ಲಿ ಅವರಿಗೆ ಉಳಿಯಲು ವ್ಯವಸ್ಥೆ ಮಾಡಿಕೊಡಲಾಗಿತ್ತು.

ಬುಧವಾರ ಬೆಳಗ್ಗೆ ಎಷ್ಟು ಹೊತ್ತಾದರೂ ಜಗನ್ನಾಥ್ ಬಾಗಿಲು ತೆರೆದಿರಲಿಲ್ಲ. ಇದರಿಂದ ಅನುಮಾನಗೊಂಡ ಪ್ರವಾಸಿ ಮಂದಿರದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ನೋಡಿದಾ ಫ್ಯಾನ್ ಗೆ ನೇಣು ಬಿಗಿದುಕೊಂಡು ಅವರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಸಂಸದ ಜಯಪ್ರಕಾಶ್ ಹೆಗ್ಡೆ ಮತ್ತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ಪ್ರವಾಸಿ ಮಂದಿರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಹಣದ ಸಮಸ್ಯೆ ಕಾರಣ : ಜಗನ್ನಾಥ್ ಅವರಿಗೆ ಹಣದ ಮುಗ್ಗಟ್ಟು ಎದುರಾಗಿತ್ತು ಇದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅವರ ಕುಟುಂಬದವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+