ರನ್ ಫಾರ್ ಭಾರತ್ ಓಟದಲ್ಲಿ ಪಾಲ್ಗೊಳ್ಳಿ
ಬೆಂಗಳೂರು, ಆ.14 : ಸಮಗ್ರ ವಿಕಾಸ ಸಂಸ್ಥೆ 67 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರನ್ ಫಾರ್ ಭಾರತ್ ಎಂಬ ಓಟದ ಅಭಿಯಾನವನ್ನು ಆಯೋಜಿಸಿದೆ. ಓಟದಲ್ಲಿ ಭಾಗವಹಿಸುವ ಮೂಲಕ ನೀವು ಉತ್ತರಾಖಂಡ್ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಬಹುದಾಗಿದೆ.
ಕಳೆದ ವರ್ಷದ ಓಟದ ಯಶಸ್ಸಿನ ನಂತರ ಸಮಗ್ರ ವಿಕಾಸ ಸಂಸ್ಥೆ ಈ ಬಾರಿ 2013ರ ರನ್ ಫಾರ್ ಭಾರತ್ ಅಭಿಯಾನ ಹಮ್ಮಿಕೊಂಡಿದೆ. ಆ.15ರ ಗುರುವಾರ ಬೆಳಗ್ಗೆ 9 ಗಂಟೆಗೆ ಜಯನಗರದ ಚಂದ್ರಗುಪ್ತ ಮೌರ್ಯ ಕ್ರೀಡಾಂಗಣದಿಂದ ಓಟ ಪ್ರಾರಂಭವಾಗಲಿದೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅನಂತ್ ಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಜಯನಗರ ಶಾಸಕ ಬಿ.ಎನ್.ವಿಜಯ್ ಕುಮಾರ್, ನಿವೃತ್ತ ಸೇನಾಧಿಕಾರಿ ಮೇಜರ್ ಪ್ರಮೋದ್ ಕಪೂರ್, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ಕೊಳಲುವಾದಕ ಪ್ರವೀಣ್ ಗೋಡ್ಕಿಂಡಿ ಗುರುವಾರದ ಓಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆ.15 ರಂದು ಚಂದ್ರಗುಪ್ತ ಮೌರ್ಯ ಕ್ರೀಡಾಂಗಣದಲ್ಲಿ ಬೆಳಗ್ಗೆ 7.30ರಿಂದ 8.30ರ ತನಕ ನೋಂದಣಿ ಕಾರ್ಯ ನಡೆಯಲಿದ್ದು, 9 ಗಂಟೆಗೆ 5 ಕಿ.ಮೀ.ನ ಓಟ ಪ್ರಾರಂಭವಾಗಲಿದೆ. 10 ಗಂಟೆಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಓಟದಲ್ಲಿ ಭಾಗವಹಿಸುವವರು ಆನ್ ಲೈನ್ ಮೂಲಕವೂ http://samagravikasa.org ವೆಬ್ ಸೈಟ್ ಗೆ ಭೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬಹುದು.
67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ












Click it and Unblock the Notifications