ಸ್ವಾತಂತ್ರ್ಯೋತ್ಸವ ಸಂದರ್ಭಕ್ಕೆರಡು ಸಮಾಧಾನಕರ ಸುದ್ದಿ
ಅಹಮದಾಬಾದ್, ಆಗಸ್ಟ್ 14: ಇಡೀ ರಾಷ್ಟ್ರ ಇನ್ನೇನು 67ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಮಿಂದೇಳಲಿದೆ. ಈ ಸಂಭ್ರಮನ್ನು ಮತ್ತಷ್ಟು ಹೆಚ್ಚಿಸುವ ಒಂದೆರಡು ಸಿಹಿ/ಸಮಾಧಾನಕರ ಸುದ್ದಿಗಳು ಇಲ್ಲಿವೆ.
ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲು ಅಮೆರಿಕದಲ್ಲಿನ ಅನಿವಾಸಿ ಭಾರತೀಯರು ಸಿದ್ಧತೆ ನಡೆಸಿದ್ದಾರೆ. ಹಾಗೆಯೇ, ನಮಗೆ ಸ್ವಾತಂತ್ರ್ಯವನ್ನು ವಾಪಸ್ ಕೊಟ್ಟ ಬ್ರಿಟೀಶರ ನಾಡಿನಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶೇಷ ಮಣೆ ಹಾಕಲಾಗಿದೆ. ಈ ಇಬ್ಬರೂ ಗುಜರಾತ್ ರಾಜ್ಯಕ್ಕೆ ಸಂಬಂಧಪಟ್ಟವರಾದರೂ ಪರಸ್ಪರ ವಿರೋಧಿ ಕ್ಷೇತ್ರದವರು ಎಂಬುದು ಗಮನಾರ್ಹ.

ಅಮೆರಿಕದ ಬೋಸ್ಟನ್ ನಲ್ಲಿ ನಮ್ಮ ಭ್ರಷ್ಟಾಚಾರ ವಿರೋಧಿ ಹೋರಾಟಗಾರ, 76 ವರ್ಷದ ಹಿರಿಯ ಜೀವ ಅಣ್ಣಾ ಹಜಾರೆ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲು ಅಮೆರಿಕದಲ್ಲಿನ ಅನಿವಾಸಿ ಭಾರತೀಯರು ಸಿದ್ಧತೆ ನಡೆಸಿದ್ದಾರೆ.
ರಾಜಕೀಯೇತರ ಕ್ಷೇತ್ರದ ಭಾರತೀಯ ನಾಯಕರೊಬ್ಬರು ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಇಂತಹ ಅದ್ದೂರಿ ಸ್ವಾಗತ ಪಡೆಯುತ್ತಿರುವುದು ಸ್ವಾತಂತ್ರ್ಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿದೆ. ಇದು ಎಲ್ಲ ಭಾರತೀಯರಿಗೂ ಸಲ್ಲುವ ಗೌರವವಾಗಿದೆ.
ನಾಸ್ಡಾಕ್ ಘಂಟೆ ರಿಂಗಣಿಸುವ ಭಾಗ್ಯ ಅಣ್ಣಾ ಹಜಾರೆಗೆ: ಅವರು ಆಗಸ್ಟ್ 16 ರಿಂದ ತಮ್ಮ ಎರಡು ವಾರಗಳ ಅಮೆರಿಕ ಪ್ರವಾಸವನ್ನು ಆರಂಭಿಸಲಿದ್ದು ಈ ವೇಳೆ ನ್ಯೂಯಾರ್ಕ್ ನಲ್ಲಿ ನಡೆಯಲಿರುವ ಭಾರತೀಯ ಸ್ವಾತಂತ್ರ್ಯ ದಿನಾಚರಣೆ ಪರೇಡ್ ನೇತೃತ್ವವನ್ನು ವಹಿಸಲಿದ್ದಾರೆ. ಈ ಪರೇಡಿನಲ್ಲಿ ಸಾವಿರಾರು ಭಾರತೀಯ ಅಮೆರಿಕನರು ಭಾಗವಹಿಸಲಿದ್ದಾರೆ.
ಇದೇ ವೇಳೆ ಪ್ರತಿಷ್ಠಿತ ಷೇರು ಮಾರುಕಟ್ಟೆಯ ನಾಸ್ಡಾಕ್ ಘಂಟೆಯನ್ನು ರಿಂಗಣಿಸುವ ಭಾಗ್ಯವೂ ಇವರದಾಗಲಿದೆ. ಆ ಬಳಿಕ ಹಜಾರೆ ಸೌತ್ ಕ್ಯಾರೊಲಿನಾದ ಗವರ್ನರ್ ಆಗಿರುವ ಭಾರತೀಯ ಅಮೆರಿಕನ್ ಪ್ರಜೆ ನಿಕ್ಕಿ ಹ್ಯಾಲಿ ಅವರು ಆಯೋಜಿಸಿರುವ ಭೋಜನ ಕೂಟದಲ್ಲಿ ಭಾಗವಹಿಸಲಿದ್ದಾರೆ.
ಎರಡು ವಾರಗಳ ತಮ್ಮ ಅಮೆರಿಕ ಭೇಟಿಯ ವೇಳೆ ಹಜಾರೆ ಅವರು ನ್ಯೂಯಾರ್ಕಿನ ಕ್ಯಾಪಿಟಲ್ ಹಿಲ್ ನಲ್ಲಿ ದೇಶದ ಸಂಸದರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಜತೆಗೆ, ವಿಶ್ವಸಂಸ್ಥೆಯ ಮುಖ್ಯಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮವೂ ಅವರ ಪ್ರವಾಸದಲ್ಲಿದೆ.
ಹಾಗೆಯೇ, ಸ್ಯಾನ್ ಫ್ರಾನ್ಸಿಸ್ಕೋ, ಮೇರಿಲ್ಯಾಂಡ್, ವಾರ್ಟನ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾ ಮತ್ತು ಕೊಲಂಬಿಯಾ ಯುನಿವರ್ಸಿಟಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗದೊಂದಿಗಿನ ಸಂವಾದದಲ್ಲಿ ಭಾಗವಹಿಸಲಿರುವರು.
ಭಾರತದಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಜನಪ್ರಿಯರಾಗಿರುವ ಹಜಾರೆ ಅವರ ಮಾತುಗಳನ್ನು ಆಲಿಸಲು ಅಮೆರಿಕನರು ಭಾರೀ ಕುತೂಹಲದಿಂದಿದ್ದು, ಭ್ರಷ್ಟಾಚಾರ ಕುರಿತಾಗಿನ ಅವರ ದೃಷ್ಟಿಕೋನಗಳನ್ನು ದೇಶದ ತನ್ನ ಓದುಗರಿಗೆ ವಿವರಿಸುವ ಸಲುವಾಗಿ ಮಾಧ್ಯಮಗಳೂ ಹಜಾರೆ ಅವರ ಸಂದರ್ಶನ ಪಡೆಯಲು ಉತ್ಸುಕವಾಗಿವೆ.
67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications