ಬಳ್ಳಾರಿಯಲ್ಲಿ ಸಿಕ್ತು 20 ಕೋಟಿ ಅಕ್ರಮ ಅದಿರು

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸಿದ್ದಾಪುರ ಬಳಿಯಿರುವ ಸ್ಟಾಕ್ ಯಾರ್ಡ್‌ನಲ್ಲಿ ಸುಮಾರು 70 ಸಾವಿರ ಟನ್ ಅದಿರನ್ನು ಸಂಗ್ರಹಿಸಲಾಗಿತ್ತು. ಜಿಲ್ಲಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಸೂಚನೆಯಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಇದನ್ನು ವಶಪಡಿಸಿಕೊಂಡಿದ್ದಾರೆ.
ಈ ಸ್ಟಾಕ್ ಯಾರ್ಡ್ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಸ್ವಸ್ತಿಕ್ ನಾಗರಾಜ್ ಅವರದ್ದಾಗಿತ್ತು ಎಂದು ತಿಳಿದು ಬಂದಿದ್ದು, ದೊರಕಿರುವ ಅದಿರಿನ ಮೌಲ್ಯ ಸುಮಾರು 20ಕೋಟಿ ರೂಪಾಯಿಗೂ ಅಧಿಕ ಎಂದು ಅಂದಾಜಿಸಲಾಗಿದೆ.
ಸ್ಟಾಕ್ ಯಾರ್ಡ್ ನಲ್ಲಿ ಸಂಗ್ರಹಿಸಿದ್ದ ಅದಿರಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ಅಕ್ರಮ ಗಣಿಗಾರಿಕೆಯಿಂದ ತೆಗೆದ ಅದಿರನ್ನು ಸಂಗ್ರಹಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಂದಾಯ ಅಧಿಕಾರಿಗಳ ತಂಡ ಸ್ಟಾಕ್ ಯಾರ್ಡ್ ನಲ್ಲಿ ಬೀಡುಬಿಟ್ಟಿದ್ದು, ಅದಿರಿನ ಮೌಲ್ಯದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
(67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ)












Click it and Unblock the Notifications