ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ

building collapse
ಬೆಂಗಳೂರು, ಆ.19 : ಜಯನಗರ ಸಮೀಪದ ಸೋಮೇಶ್ವರ ನಗರದಲ್ಲಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಕಟ್ಟಡ ಕುಸಿದ್ದು ಬಿದ್ದಿದೆ. ಘಟನೆಯಲ್ಲಿ 10 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳ ಅಡಿ ಹಲವಾರು ಕಾರ್ಮಿಕರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ಅಗ್ನಿಶಾಮಕದಳ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.

ಸೋಮವಾರ ಬೆಳಗ್ಗೆ 9.45ರ ಸುಮಾರಿಗೆ ನಿರ್ಮಾಣ ಹಂತದಲ್ಲಿದ್ದ 6 ಮಹಡಿಯ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡ ಕುಸಿದು ಬೀಳುವ ಸಂದರ್ಭದಲ್ಲಿ 75 ಕಾರ್ಮಿಕರು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇದುವರೆಗೂ 10 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ.

ಕಟ್ಟಡ ಕುಸಿತದಿಂದ 20 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿದ್ಧಾಪುರ ಪೊಲೀಸರು ಆಗಮಿಸಿದ್ದು, ಕಳಪೆ ಕಾಮಗಾರಿಯೇ ಘಟನೆಗೆ ಕಾರಣ ಎಂದು ಹೇಳಿದ್ದಾರೆ. ಕಟ್ಟಡ ಕುಸಿತಗೊಂಡ ಜಾಗದಲ್ಲಿ ರಸ್ತೆಗಳು ಕಿರಿದಾಗಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಆರು ತಿಂಗಳ ಅವಧಿಯಲ್ಲಿ 6 ಅಂತಸ್ತನ್ನು ನಿರ್ಮಾಣ ಮಾಡಲಾಗಿದೆ. ಕಳಪೆ ಕಾಮಗಾರಿ ಮಾಡಿದ್ದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ತಿಳಿದು ಬಂದಿದೆ. ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಕುಸಿದು ಬಿದ್ದಿರುವುದರಿಂದ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿ ಉಂಟಾಗಿದೆ.

ಪೊಲೀಸ್ ಆಯುಕ್ತರ ಭೇಟಿ : ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಟ್ಟಡ ಸಮೀರ್ ಮುಲ್ಲಾ ಎಂಬುವವರಿಗೆ ಸೇರಿದ್ದು ಎಂದು ಅವರು ತಿಳಿಸಿದ್ದು, ಅವರು ಸ್ಥಳಕ್ಕೆ ಇನ್ನೂ ಆಗಮಿಸಿಲ್ಲ.

ಬಿಬಿಎಂಪಿಯಿಂದ 2 ಅಂತಸ್ತು ನಿರ್ಮಾಣಕ್ಕೆ ಮಾತ್ರ ಅನುಮತಿ ಪಡೆದು, ಆರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಕಟ್ಟಡದ ಹಿಂಬದಿಯ ಖಾಲಿ ನಿವೇಶನದ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+