ಭವ್ಯ ಭಾರತ ಕನಸುಗಾರ ರಾಜೀವ್ ಸ್ಮರಣೆ
ನವದೆಹಲಿ, ಆ.20 : ಭವ್ಯ ಭಾರತದ ಕನಸು ಹೊತ್ತಿದ್ದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮ ದಿನೋತ್ಸವವನ್ನು ಇಂದು(ಆ.20) ಆಚರಿಸಲಾಗಿದೆ. ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳ 'ವೀರ ಭೂಮಿ'ಗೆ ಅವರ ಮೊಮ್ಮಗಳು ಕೂಡಾ ಬಂದು ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಮಹಮ್ಮದ್ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಕುಟುಂಬ ಸೇರಿದಂತೆ ಹಲವಾರು ಗಣ್ಯರು ನವದೆಹಲಿಯಲ್ಲಿರುವ ವೀರ್ ಭೂಮಿಗೆ ಭೇಟಿ ನೀಡಿದ್ದಾರೆ.
ರಾಜೀವ್ ಗಾಂಧಿ ಅವರ ಹುಟ್ಟುಹಬ್ಬವನ್ನು 'ಸದ್ಭಾವನ ದಿವಸ್' ಎಂದು ದೇಶದೆಲ್ಲೆಡೆ ಆಚರಿಸಲಾಗಿದೆ. ಯುಪಿಎ ಸರ್ಕಾರ ರಾಜೀವ್ ಗಾಂಧಿ ಅವರ ಹುಟ್ಟುಹಬ್ಬಡ ಕೊಡುಗೆಯಾಗಿ 'ಆಹಾರ ಭದ್ರತಾ ಕಾಯ್ದೆ' ಜಾರಿಗೆ ತಂದಿದೆ.
ದೇಶದ ಯುವ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಅವರು ದೇಶದ ಚುಕ್ಕಾಣಿ ಹಿಡಿದಾಗ 40 ವರ್ಷ ವಯಸ್ಸಾಗಿತ್ತು. ಇಂದಿರಾಗಾಂಧಿ ಅವರು 1984ರ ಅಕ್ಟೋಬರ್ 31 ರಂದು ಹತ್ಯೆಗೀಡಾದ ಮೇಲೆ ರಾಜೀವ್ ಅವರ ಮೇಲೆ ದೇಶದ ಜವಾಬ್ದಾರಿ ಹೊರೆಸಲಾಗಿತ್ತು.
ಮೇ 21, 1991ರಲ್ಲಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕಾಗಿ ತೆರಳಿದ್ದ ರಾಜೀವ್ ಗಾಂಧಿ ಅವರು ಎಲ್ ಟಿಟಿಇ ನಡೆಸಿದ ಆತ್ಮಾಹುತಿ ದಾಳಿಗೆ ಬಲಿಯಾದರು. ರಾಜೀವ್ ಗಾಂಧಿ ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದೇಶದ ಹಲವಾರು ಕ್ಷೇತ್ರಗಳಲ್ಲಿ ಸುಧಾರಣೆಗೆ ಶ್ರಮಿಸಿದ್ದ ರಾಜೀವ್ ಗಾಂಧಿ ಅವರ ಜನ್ಮ ದಿನೋತ್ಸವ ಚಿತ್ರಗಳು ಇಲ್ಲಿವೆ ನೋಡಿ...

ರಾಜೀವ್ ಜನ್ಮದಿನೋತ್ಸವ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ಪತಿ ರಾಬರ್ಟ್ ವದ್ರಾ ಪುತ್ರಿ ಮಿರಾಯ ವದ್ರಾ ಜತೆ ವೀರ್ ಭೂಮಿಗೆ ಆಗಮಿಸಿದ್ದರು.

ಪ್ರಿಯಾಂಕಾ ಗಾಂಧಿ ಕುಟುಂಬ
ಪ್ರಿಯಾಂಕಾ ಗಾಂಧಿ ಕುಟುಂಬಸ್ಥರು ವೀರ್ ಭೂಮಿಗೆ ಆಗಮಿಸಿ ನಮನ ಸಲ್ಲಿಸಿದರು

ಸೋನಿಯಾ- ಸುಷ್ಮಾ
ಸಂಸತ್ ಭವನದಲ್ಲಿ ನಡೆದ ರಾಜೀವ್ ಗಾಂಧಿ ಅವರ 69ನೇ ಜನ್ಮ ದಿನೋತ್ಸವದ ಸಮಾರಂಭದಲ್ಲಿ ಕಾಂಗ್ರೆಸ್ಸಿನ ಸೋನಿಯಾ ಗಾಂಧಿ ಹಾಗೂ ಬಿಜೆಪಿಯ ಸುಷ್ಮಾ ಸ್ವರಾಜ್ ಉಭಯಕುಶಲೋಪರಿ

ವೀರ ಭೂಮಿಯಲ್ಲಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಮಹಮ್ಮದ್ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಕುಟುಂಬ ಸೇರಿದಂತೆ ಹಲವಾರು ಗಣ್ಯರು ನವದೆಹಲಿಯಲ್ಲಿರುವ ವೀರ್ ಭೂಮಿಗೆ ಭೇಟಿ ನೀಡಿದ್ದಾರೆ.

ರಾಷ್ಟ್ರಪತಿಗಳಿಂದ ಸ್ಮರಣೆ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳ ವೀರ್ ಭೂಮಿ ಬಳಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ರಾಷ್ಟ್ರಪತಿಗಳಿಂದ ಸ್ಮರಣೆ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳ ವೀರ್ ಭೂಮಿ ಬಳಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನವದೆಹಲಿಯಲ್ಲಿ
ನಗರಾಭಿವೃದ್ಧಿ ಸಚಿವ ಕಮಲನಾಥ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಜತೆ ಆಗಮಿಸಿದರು.

ನವದೆಹಲಿಯಲ್ಲಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಮಹಮ್ಮದ್ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಜತೆಗೆ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡರು.

ನವದೆಹಲಿಯಲ್ಲಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಮಹಮ್ಮದ್ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಜತೆಗೆ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡರು.

ಹೈದರಾಬಾದಿನಲ್ಲಿ
ಇತ್ತೀಚೆಗೆ ಸೀಮಾಂಧ್ರ, ತೆಲಂಗಾಣ ಗಲಾಟೆಯಿಂದ ಧ್ವಂಸಗೊಂಡಿದ್ದ ರಾಜೀವ್ ಗಾಂಧಿ ಪ್ರತಿಮೆ ಮರು ಸ್ಥಾಪನೆಗೊಂಡಿದೆ

ಅಲಹಾಬಾದಿನಲ್ಲಿ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಅಭಿಮಾನಿಗಳಿಂದ ಜನ್ಮದಿನಾಚರಣೆ

ವೀರ್ ಭೂಮಿಯಲ್ಲಿ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ

ಪತಿಗೆ ನಮನ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಅವರು ತಮ್ಮ ಪತಿಯ ಸಮಾಧಿಗೆ ನಮಿಸಿದರು

ವೀರ್ ಭೂಮಿಯಲ್ಲಿ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಹಾಗೂ ಪ್ರಧಾನಿ ಮನಮೋಹನ್ ಸಿಂಗ್

ವೀರ್ ಭೂಮಿಯಲ್ಲಿ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನಾಚರಣೆ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ

ಪ್ರಧಾನಿಯಿಂದ ನಮನ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಸಮಾಧಿಗೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ಪುಷ್ಪ ಅರ್ಪಣೆ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications