ಲೋಕಸಭೆ ಉಪ ಚುನಾವಣೆಗೆ ನೀರಸ ಪ್ರತಿಕ್ರಿಯೆ

ಬೆಂಗಳೂರು, ಆ.21 ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಲೋಕಸಭೆ ಉಪ ಚುನಾವಣೆ ನೀರಸ ಅಂತ್ಯ ಕಂಡಿದೆ. ಬೆಳಗ್ಗೆಯಿಂದ ನಿಧಾನಗತಿಯಲ್ಲಿ ಸಾಗಿದ ಮತದಾನ ಸಂಜೆ 5 ಗಂಟೆ ವೇಳೆಗೆ ಮುಕ್ತಾಯಗೊಂಡಿದೆ. ಎರಡೂ ಕ್ಷೇತ್ರಗಳಲ್ಲಿ ಶೇ 50ರಷ್ಟು ಮತದಾನವಾಗಬಹುದು ಎಂದು ಅಂದಾಜಿಸಲಾಗಿದೆ.

ಸಂಜೆ 4 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರದಲ್ಲಿ ಶೇ.39ರಷ್ಟು ಹಾಗೂ ಮಂಡ್ಯದಲ್ಲಿ ಶೇ.42.47ರಷ್ಟು ಮತದಾನವಾಗಿದೆ. ಮತದಾನ ಮುಕ್ತಾಯವಾಗಲು ಕೇವಲ ಒಂದು ಗಂಟೆ ಬಾಕಿ ಇದ್ದರೂ ಉಭಯ ಕ್ಷೇತ್ರಗಳಲ್ಲಿ ಶೇ 50ರಷ್ಟು ಮತದಾನವಾಗಿರಲಿಲ್ಲ.

voting

ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಹೊರತು ಪಡಿಸಿದರೆ, ಎರಡೂ ಕ್ಷೇತ್ರಗಳ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಉಪ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅವಧಿ ಕೇವಲ ಎಂಟು ತಿಂಗಳು ಮಾತ್ರ ಇರುವುದರಿಂದ ಜನರು ಮತದಾನ ಮಾಡಲು ನಿರಾಸಕ್ತಿ ತೋರಿದ್ದಾರೆ.

ಎರಡೂ ಕ್ಷೇತ್ರಗಳ 22 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಆ.24ರ ಶನಿವಾರ ಮತ ಎಣಿಕೆ ನಡೆಯಲಿದ್ದು ವಿಜೇತರು ಯಾರು? ಎಂದು ತಿಳಿದು ಬರಲಿದೆ. ಎರಡೂ ಕ್ಷೇತ್ರಗಳಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿರುವುದರಿಂದ ಅಭ್ಯರ್ಥಿಗಳ ಗೆಲುವಿನ ಅಂತರವೂ ಕಡಿಮೆಯಾಗಲಿದೆ. (ಮತದಾನದಂದು ಮಾತಿನ ಸಮರ)

ಕುಮಾರಸ್ವಾಮಿ ಮತದಾನ : ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ರಾಮನಗರದ ಕೇತಗಾನಹಳ್ಳಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ನಟ ಅಂಬರೀಶ್ ಮತ್ತು ಸಮಲತಾ ದಂಪತಿ ಮಂಡ್ಯಾದ ದೊಡ್ಡ ಅರಸೀಕೆರೆ ಮತಗಟಗ್ಟೆಯಲ್ಲಿ ಮತದಾನ ಮಾಡಿದರು.

ಡಿ.ಕೆ.ಶಿವಕುಮಾರ್ ಮತದಾನ : ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭೆ ಉಪ ಚುನಾವಣೆಯಲ್ಲಿ ಕನಕಪುರದ ದೊಡ್ಡ ಆಲನಹಳ್ಳಿಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಜೊತೆ ಮಾತದಾನ ಮಾಡಿದ್ದಾರೆ. ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಬೆಳಗ್ಗೆ 10 ಗಂಟೆಯ ವರೆಗೆ ಶೇ 6ರಷ್ಟು ಮತದಾನವಾಗಿದೆ. ಜನರು ಸರದಿ ಸಾಲಿನಲ್ಲಿ ನಿಂತು, ಆಸಕ್ತಿಯಿಂದ ಮತದಾನ ಮಾಡುತ್ತಿದ್ದಾರೆ.

ಮತದಾನ ಬಹಿಷ್ಕಾರ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ, ಉಪ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ 1,100 ಮತದಾರರಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದ 500ಕ್ಕೂ ಹೆಚ್ಚು ಮತದಾರರಿರುವ ಐಚನಹಳ್ಳಿ ಗ್ರಾಮಸ್ಥರು ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮತದಾನವನ್ನು ಬಹಿಷ್ಕರಿಸಿದ್ದಾರೆ.

ಮತದಾನ ಪ್ರಾರಂಭ : ಭಾರೀ ಕುತೂಹಲ ಕೆರಳಿಸಿರುವ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಲೋಕಸಭೆ ಉಪ ಚುನಾವಣೆಗೆ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಮತಯಂತ್ರಕ್ಕೆ ಪೂಜೆ ಮಾಡಲು ಬಂದ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಅವರಿಗೆ ಚುನಾವಣಾಧಿಕಾರಿಗಳು ಅವಕಾಶ ನೀಡಲಿಲ್ಲ. ಆದ್ದರಿಂದ ಅವರು ಮತಯಂತ್ರಕ್ಕೆ ಪೂಜೆ ಸಲ್ಲಿಸದೆ ಮೊದಲ ಮತ ಚಲಾಯಿಸಿದ್ದಾರೆ.

ಅಧಿಕಾರಿಗಳ ಗೊಂದಲ : ಸಿ.ಎಸ್.ಪುಟ್ಟರಾಜು ಅವರು ಮತದಾನ ಮಾಡಿದಾಗ ಅಧಿಕಾರಿಗಳು ಅವರ ಬಲಗೈ ಕಿರುಬೆರಳಿಗೆ ಶಾಹಿ ಹಾಕಿದರು. ಎಡಗೈ ಕಿರುಬೆರಳಿಗೆ ಶಾಹಿ ಹಾಕಬೇಕೆಂದು ಚುನಾವಣಾ ಆಯೋಗ ಆದೇಶ ನೀಡಿತ್ತು. ಇದರಿಂದ ಮತ್ತೆ ಅವರ ಎಡಗೈ ಕಿರುಬೆರಳಿಗೆ ಶಾಹಿ ಹಚ್ಚಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಟ್ಟು 13 ಅಭ್ಯರ್ಥಿಗಳ ಭವಿಷ್ಯವನ್ನು 20,23,891 ಮತದಾರರು ನಿರ್ಧರಿಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನ ಡಿ.ಕೆ.ಸುರೇಶ್ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ.

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದು, 16,18,142 ಮತದಾರರು ತಮ್ಮ ತೀರ್ಪು ನೀಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಟಿ ರಮ್ಯಾ ಮತ್ತು ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ನಡುವೆ ನೇರ ಹಣಾ ಹಣಿ ಏರ್ಪಟ್ಟಿದೆ.

ಮತಗಟ್ಟೆಗಳ ವಿವರ : ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 655 ಸೂಕ್ಷ್ಮ ಮತಗಟ್ಟೆ, 445 ಅತಿ ಸೂಕ್ಷ್ಮ ಮತಗಟ್ಟೆ ಮತ್ತು 1285 ಸಾಮಾನ್ಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮಂಡ್ಯ ಲೋಕಸಭೆ ಕ್ಷೇತ್ರಗಳಲ್ಲಿ 1364 ಸಾಮಾನ್ಯ ಮತಗಟ್ಟೆಗಳು, 380 ಸೂಕ್ಮ ಮತಗಟ್ಟೆಗಳು ಮತ್ತು 230 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+